Sunday, November 24, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟುವಿನಲ್ಲಿ ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಕ್ರಮವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟುವಿನಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಡುಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀಯುತ ಸಂದೇಶ್ ಕುಮಾರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಶಾಲಾಭಿವೃದ್ಧಿ ಸಮಿತಿಯ ರಚನೆ ಪಾತ್ರ ಶಾಲೆಯ ಅಭಿವೃದ್ಧಿಯಲ್ಲಿ ಎಸ್‌ಡಿಎಂಸಿ ಹಾಗೂ ಪೋಷಕರ ಪಾತ್ರ ಶಾಲೆಯ ಶಿಕ್ಷಕರು ಪೋಷಕರ ಮಧ್ಯೆ ಎಸ್‌ಡಿಎಂಸಿಯ ಸಾಮರಸ್ಯ, ಶಾಲೆ ಅಭಿವೃದ್ಧಿ ಪಥದತ್ತ ಯಾವ ರೀತಿ ಕೊಂಡೊಯ್ಯಬಹುದು ಹಾಗೂ ಹೊಸ ಶಿಕ್ಷಣ ನೀತಿಯ ಕುರಿತಾಗಿ ಸವಿವರವಾದ ಮಾಹಿತಿಯನ್ನು ನೀಡಿದರು.

ಬಾಳ್ತಿಲ ಕ್ಲಸ್ಟರಿನ ಸಂಪನ್ಮೂಲ ವ್ಯಕ್ತಿ ಶ್ರೀಯುತ ಸತೀಶ್ ರಾವ್ ಇವರು ಓದು ಕರ್ನಾಟಕ ಹಾಗೂ ಶಾಲಾ ಚಟುವಟಿಕೆಯ ಬಗ್ಗೆ, ಶಾಲೆ ಇನ್ನಷ್ಟು ಅಭಿವೃದ್ಧಿ ಪಥದಲ್ಲಿ ಹೇಗೆ ಕೊಂಡೊಯ್ಯಬಹುದು ಎಂಬುದಾಗಿ ಸವಿವರವಾಗಿ ಮಾಹಿತಿ ನೀಡಿದರು .

ವೇದಿಕೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀವಿಠ್ಠಲ ನಾಯಕ್ ,ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶೋಭಾ, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ಯಾಮಲಾ ಉಪಸ್ಥಿತರಿದ್ದರು.

ತರಬೇತಿ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿಯ ಎಲ್ಲಾ ಸದಸ್ಯರು ಹಾಗೂ ಪೋಷಕರು ಭಾಗವಹಿಸಿದ್ದರು. ಪೋಷಕರಿಗೆ ಪ್ರಶ್ನೆಗಳನ್ನು ಕೇಳಿ ಸರಿಯಾದ ಉತ್ತರ ನೀಡಿದವರಿಗೆ ಬಹುಮಾನಗಳನ್ನು ನೀಡಲಾಯಿತು.

ಮುಖ್ಯಶಿಕ್ಷಕಿ ಚೇತನ ಕುಮಾರಿ.ಪಿ.ವಿ ಸ್ವಾಗತಿಸಿ, ಶಿಕ್ಷಕಿ ಮಮತಾ ಶೆಟ್ಟಿ ವಂದಿಸಿದರು. ಗೌರವ ಶಿಕ್ಷಕಿ ರೇಖಾ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿಯರಾದ ಸುಮಿತ್ರಾ , ಬಬಿತಾ, ಅಂಗನವಾಡಿ ಕಾರ್ಯಕರ್ತೆ ಸುರೇಖಾ ಸಹಕರಿಸಿದರು.