Sunday, January 19, 2025
ಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಜ. 10 ರಿಂದ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ `ಬೂಸ್ಟರ್ ಡೋಸ್’ ನೀಡಿಕೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಜ.10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರು, ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋವಿಡ್ 3 ನೇ ಅಲೆ ನಿಯಂತ್ರಣಕ್ಕೆ ಇನ್ನೂ ಬಿಗಿ ಕ್ರಮ ಕೈಗೊಳ್ಳಬಹುದು. ಆದರೆ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ. ಜನರು ಆತಂಕ ಪಡಬೇಕಾಗಿಲ್ಲ. ಈಗ ಲಾಕ್ ಡೌನ್ ಕಳೆದು ಹೋಗಿರುವ ನೀತಿ. ಮತ್ತೆ ಹೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು