Recent Posts

Sunday, January 19, 2025
ಉಡುಪಿಸುದ್ದಿ

ಅಮಲು ಪದಾರ್ಥ ಸೇವಿಸಿ ನಡುರಸ್ತೆಯಲ್ಲಿ ಹೈಡ್ರಾಮ : “ನಮ್ಮನ್ನು ಮುಟ್ಟಿದರೆ ಚೆನ್ನಾಗಿರೋಲ್ಲ” ಪೊಲೀಸರಿಗೆ ಅವಾಜ್ ಹಾಕಿದ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪಡುಬಿದ್ರಿ : ಡಿ.07 ರ ಸಂಜೆ ಚೆನೈ ಮೂಲದ ಖಾಸಗಿ ಕಾಲೇಜಿನ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳು ಅಮಲು ಪದಾರ್ಥ ಸೇವಿಸಿ ನಡುರಸ್ತೆಯಲ್ಲೇ ಹೊಡೆದಾಟ ನಡೆಸಿ ರಂಪಾಟ ಮಾಡಿದ ಘಟನೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲ್ಲಿ ನಡೆದಿದೆ.

“ಇಬ್ಬರು ಯುವಕರು ಹಾಗೂ ಒರ್ವ ಯುವತಿಯ ಮೂವರು ಕೂಡಾ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪೆಟ್ರೋಲ್ ಖಾಲಿಯಾಗಿ ಸ್ಕೂಟರ್ ನಿಂತಾಗ ಗಲಾಟೆ ಆರಂಭಿಸಿದ್ದಾರೆ. ವಿದ್ಯಾರ್ಥಿಗಳ ಬೀದಿ ರಂಪಾಟ ಹೆಚ್ಚಾದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರಿಗೆ “ನಮ್ಮನ್ನು ಮುಟ್ಟಿದರೆ ಪರಿಣಾಮ ಚೆನ್ನಾಗಿರೋಲ್ಲ” ಎಂದು ಅವಾಜ್ ಹಾಕಿದ್ದಾರೆ. ಕೊನೆಗೂ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ಸಾರ್ವಜನಿಕರ ಸಹಾಯದಿಂದ ಅಂಬುಲೆನ್ಸ್ ನಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾರ್ಥಿಗಳ ಹೈಡ್ರಾಮದಿಂದಾಗಿ ಸಾರ್ವನಿಕರಿಗೆ ಪುಕ್ಕಟೆ ಮನರಂಜನೆ ದೊರಕಿದೆ.