Monday, January 20, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮೈ ಕೈ ನೋವು, ಸುಸ್ತಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್‌ – ಕಹಳೆ ನ್ಯೂಸ್

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುಮಾರು ನಾಲ್ಕು ಕಿ.ಮೀ. ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೈ ಕೈ ನೋವು, ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿಗಾಗಿ ಅವರು ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ.

ಮೇಕೆದಾಟು ಯೋಜನೆ ಕುರಿತಂತೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಅವರು ಹೆಗ್ಗನೂರು ತಲುಪಿದ ಬಳಿಕ ಭೋಜನ ವಿರಾಮ ಪಡೆದುಕೊಂಡಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಬೂಸ್ಟರ್ ಡೋಸ್ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರಿಗೆ ಈ ವೇಳೆ ಸುಸ್ತು ಹಾಗೂ ಮೈ ಕೈ ನೋವು ಕಾಣಿಸಿಕೊಂಡಿದ್ದು, ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಊಟದ ಬಳಿಕ ಸಿದ್ದರಾಮಯ್ಯ ಅವರು ವಿಶ್ರಾಂತಿಗೆ ತೆರಳಿದ್ದಾರೆ. ಒಟ್ಟು 6.5 ಕಿ.ಮೀ. ಪಾದಯತ್ರೆ ಮುಕ್ತಾಯಗೊಂಡಿದ್ದು, ಊಟ ಮಾಡಿದ ಕೆಲವು ಕಾಂಗ್ರೆಸ್ ನಾಯಕರು ಮತ್ತು ಶಾಸಕರು ತಾತ್ಕಾಲಿಕವಾಗಿ ನಿರ್ಮಿಸಿರುವ ಟೆಂಟ್‍ನಲ್ಲಿ ನಿದ್ರೆಗೆ ಜಾರಿದ್ದಾರೆ. ಆದರೆ 4 ಗಂಟೆ ನಂತರ ಪುನಃ ಪಾದಯಾತ್ರೆ ಆರಂಭಿಸಲಿದ್ದಾರೆ.