Thursday, November 14, 2024
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ ; ‘ತಮಿಳುನಾಡಲ್ಲಿ ಮಗುವನ್ನು ಚಿವುಟಿ ಕರ್ನಾಟದಲ್ಲಿ ತೊಟ್ಟಿಲು ತೂಗುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ’ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಸರ್ಕಾರ ಜಾರಿಗೆ ತಂದಿರುವ ಕಾನೂನುಗಳಿಗೆ ಕಾಂಗ್ರೆಸ್ ಗೌರವ ನೀಡದೆ, ಕೇವಲ ನಾಯಕತ್ವಕ್ಕಾಗಿ ಡಿ.ಕೆ. ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಎಂಬ ಡ್ರಾಮಾ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೇಕೆದಾಟು ಯೋಜನೆಗೆ ಕರ್ನಾಟಕದ ಭಾಜಪಾ ಸರಕಾರ ಬದ್ಧವಾಗಿದೆ ಎಂದು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಡುವಿನ ರಾಜಕೀಯ ಪ್ರತಿಷ್ಟೆಯ ಮೇಲಾಟದಲ್ಲಿ ಪಾದಯಾತ್ರೆಯ ಕ್ರೆಡಿಟ್ ತೆಗೆದುಕೊಳ್ಳಲು ಸ್ಪರ್ಧೆ ಬಿಟ್ಟರೆ ಬೇರೆನೂ ಇಲ್ಲ” ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

“ನಮ್ಮ ನೀರು ನಮ್ಮ ಹಕ್ಕು ಎನ್ನುವ ಬದ್ಧತೆ ನಮ್ಮದು. ಈ ಯೋಜನೆ ಅನುಷ್ಟಾನಗೊಳಿಸಲು ಡಿಕೆಶಿ ಅವರ ಗೆಳೆಯ ಎಂ ಕೆ ಸ್ಟಾಲಿನ್‌ ಅಡ್ಡಗಾಲು ಹಾಕಿದ್ದಾರೆ. ತಮಿಳುನಾಡಿನಲ್ಲಿ ಮಗುವನ್ನು ಚಿವುಟಿ ಕರ್ನಾಟದಲ್ಲಿ ತೊಟ್ಟಿಲು ತೂಗುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಇದು ಜನರಿಗೆ ತಿಳಿಯಲ್ಲ ಎನ್ನುವ ಭ್ರಮೆಯಲ್ಲಿದ್ದಾರೆ” ಎಂದು ಟೀಕಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

“ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಕೆದಾಟು ವಿಷಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ವಿಚಾರಣೆಯಲ್ಲಿದೆ. ತಾವು ವಕೀಲರೆಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರೇ ಯಾವುದೇ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಏನು ಮಾಡಬೇಕು ಎಂದು ಜನರಿಗೆ ತಿಳಿಸುವಿರಾ ಅಥವಾ ಪಾದಯಾತ್ರೆ ಮಾಡಿ ಮೈಲೇಜ್ ಪಡೆಯಲು ಡಿಕೆಶಿ ಜೊತೆ ಸ್ಪರ್ಧೆಗೆ ಬೀಳುತ್ತೀರಾ?” ಎಂದು ಪ್ರಶ್ನಿಸಿದೆ.

“ತಾವು ಅಧಿಕಾರದಲ್ಲಿದ್ದಾಗ 5 ವರ್ಷ ಮೇಕೆದಾಟು ಎಲ್ಲಿದೆ ಎಂದು ನೋಡದ ಸಿದ್ದರಾಮಯ್ಯನವರೇ, ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ಜಲಸಂಪನ್ಮೂಲ ಸಚಿವರಾಗಿದ್ದ ಡಿಕೆಶಿ ಅವರೇ ಆಗ ಮಲಗಿ ಈಗ ಚುನಾವಣೆಗೆ ನಿಮ್ಮ‌ ಅಸ್ತಿತ್ವ ತೋರಿಸಲು ನಿದ್ದೆಯಿಂದ ಎದ್ದಿದ್ದಿರಿ. ಭಾಜಪಾ ಸರಕಾರ ಈ ಯೋಜನೆ ಬಗ್ಗೆ ಕಾರ್ಯಪ್ರವೃತ್ತವಾಗಿದೆ. ನೀವು‌ ಮಲಗಿ” ಎಂದು ವ್ಯಂಗ್ಯವಾಡಿದ್ದಾರೆ.