Wednesday, April 23, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾಗೆ ಚೈತನ್ಯ ಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿ- ಕಹಳೆ ನ್ಯೂಸ್

ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್ ನಲ್ಲಿ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅನ್ವಿತಾ ಎ ವಿ ಇವರು ವರ್ಷದ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಟ್ಲದ ಅರುಣ್ ಮತ್ತು ವಿಜಯಲಕ್ಷ್ಮೀ ದಂಪತಿಗಳ ಪುತ್ರಿಯಾದ ಅನ್ವಿತಾ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಸ್ಯಾಕ್ಸೋಫೋನ್ ಕಚೇರಿಗಳನ್ನು ನಡೆಸಿಕೊಂಡು ಬಂದಿದ್ದಾರೆ.

ಮಂಗಳೂರಿನ ವುಡ್‍ಲ್ಯಾಂಡ್ಸ್ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅವರು ಅನ್ವಿತಾರನ್ನು ಸನ್ಮಾನಿಸಿದರು.

ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ