ಮನುಷ್ಯನಿಗೆ ಹಂದಿ ಹೃದಯದ ಕಸಿ…!! ಅಮೆರಿಕಾ ವೈದರ ಶಸ್ತ್ರಚಿಕಿತ್ಸೆ ಯಶಸ್ವಿ – ಕಹಳೆ ನ್ಯೂಸ್
ವಾಷಿಂಗ್ಟನ್ : 57 ವರ್ಷದ ವ್ಯಕ್ತಿಯೊಬ್ಬರಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಯ ಹೃದಯವನ್ನು ಶಸ್ತ್ರಚಿಕಿತ್ಸೆ ಮೂಲಕ ಅಳವಡಿಸುವಲ್ಲಿ ಯುಎಸ್‍ನ ವೈದ್ಯರು ಯಶಸ್ವಿಯಾಗಿದ್ದಾರೆ.
ಅಂಗ ದಾನಗಳ ದೀರ್ಘಕಾಲದ ಕೊರತೆಯನ್ನು ಪರಿಹರಿಸಲು ಈ ಪ್ರಕ್ರಿಯೆ ಸಹಕಾರಿಯಾಗಲಿದ್ದು, ಸದ್ಯದ ಮಟ್ಟಿಗೆ ಪ್ರಾಣಿಯಿಂದ ಮಾನವ ಕಸಿಯು ಪ್ರಮುಖ ಮೈಲಿಗಲ್ಲಾಗಿದೆ.
ಡೇವಿಡ್ ಬೆನೆಟ್ ನ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಆತನಿಗೆ ಹಂದಿ ಹೃದಯ ಅಳವಡಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.
ಇನ್ನು ಹೃದಯ-ಶ್ವಾಸಕೋಶದ ಬೈಪಾಸ್ ಮೆಷಿನ್ ಸಮಸ್ಯೆಯಿಂದ ಕಳೆದ ಹಲವು ತಿಂಗಳುಗಳಿಂದ ಡೇವಿಡ್ ಬೆನೆಟ್ ಹಾಸಿಗೆ ಹಿಡಿದಿದ್ದು, ಸಾಂಪ್ರದಾಯಿಕ ಕಸಿಗೆ ಸೂಕ್ತವಲ್ಲದ ರೋಗಿಗೆ ಕೊನೆಯ ಪ್ರಯತ್ನವಾಗಿ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಲಾಗಿದ್ದು, ಇದು ಅದ್ಭುತ ಶಸ್ತ್ರಚಿಕಿತ್ಸೆಯಾಗಿದ್ದು, ಅಂಗಗಳ ಕೊರತೆಯ ಬಿಕ್ಕಟ್ಟನ್ನು ಪರಿಹರಿಸಲು ನಮ್ಮನ್ನು ಒಂದು ಹೆಜ್ಜೆ ಹತ್ತಿರಕ್ಕೆ ತರುತ್ತದೆ ಎಂದು ಹಂದಿ ಹೃದಯವನ್ನು ಶಸ್ತ್ರಚಿಕಿತ್ಸೆಯಿಂದ ಕಸಿ ಮಾಡಿದ ವೈದ್ಯ ಬಾಟ್ರ್ಲಿ ಗ್ರಿಫಿತ್ ತಿಳಿಸಿದ್ದಾರೆ.