Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಸೋರಿಕೆ : 20 ಮಂದಿ ಅಸ್ವಸ್ಥ – ಕಹಳೆ ನ್ಯೂಸ್

ಮಂಗಳೂರು: ಮೀನು ಸಂಸ್ಕರಣಾ ಘಟಕವೊಂದರಲ್ಲಿ ರಾಸಾಯನಿಕ ಸೋರಿಕೆಯಾಗಿ 20 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ನಗರದ ಬೈಕಂಪಾಡಿಯಲ್ಲಿರುವ ಎವರೆಸ್ಟ್ ಮೀನು ಸಂಸ್ಕರಣಾ ಘಟಕದಲ್ಲಿ ನಡೆದಿದೆ.

ಈ ಘಟಕದಲ್ಲಿ 80 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಇವರಲ್ಲಿ 20 ಮಂದಿಗೆ ಉಸಿರಾಟದ ತೊಂದರೆಯುಂಟಾಗಿ ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ನಗರದ ಸುರತ್ಕಲ್‍ನಲ್ಲಿರುವ ಶ್ರೀನಿವಾಸ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದ್ದು, ಪಣಂಬೂರು ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು