Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಲೆತ್ತೂರುನಲ್ಲಿ ನಡೆದ ಸ್ವಾಮೀ ಕೊರಗಜ್ಜ ದೈವದ ಅವಹೇಳನ ಪ್ರಕರಣದ ಪ್ರಮುಖ ಆರೋಪಿ ಹಾಗೂ ಇನ್ನಿತರ ಅರೋಪಿಗಳನ್ನು ಶೀಘ್ರದಲ್ಲಿ ಬಂಧಿಸುವಂತೆ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಮನವಿ- ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ವಿಟ್ಲ ಕೊಳ್ನಾಡು ಸಾಲೆತ್ತೂರುನಲ್ಲಿ ಮುಸ್ಲಿಂ ಸಮುದಾಯದ ಮದುವೆ ಕಾರ್ಯಕ್ರಮದಲ್ಲಿ ನಡೆದ ತುಳುನಾಡಿನ ಕಾರಣಿಕ ದೈವ ಸ್ವಾಮೀ ಕೊರಗಜ್ಜ ದೈವದ ಅವಹೇಳನ ಖಂಡಿಸಿ ಪ್ರಕರಣದ ಪ್ರಮುಖ ಆರೋಪಿಯಾದ ಮದುಮಗ ಕೇರಳದ ಮಂಜೇಶ್ವರ ತಾಲೂಕಿನ ಉಪ್ಪಳದ ನಿವಾಸಿ ಉಮರುಲ್ ಬಾಶಿತ್ ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದ ಉಳಿದೆಲ್ಲ ಆರೋಪಿಗಳನ್ನು ಶ್ರೀಘ್ರದಲ್ಲಿ ಬಂಧಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳಿಗಲ್ಲಿ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತ್ತಡ್ಕ,ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ.ಕೃಷ್ಣ ಪ್ರಸನ್ನ ,ಬಜರಂಗದಳ ಜಿಲ್ಲಾ ಸಂಚಾಲಕ್ ಭರತ್, ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ,ವಿಶ್ವ ಹಿಂದೂ ಪರಿಷತ್ ವಿಟ್ಲ ಪ್ರಖಂಡ ಅಧ್ಯಕ್ಷರಾದ ಪದ್ಮನಾಭ ಕಟ್ಟೆ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು