Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿವೇಕಾನಂದರ 159ನೇ ಜಯಂತಿ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ವಿವೇಕಾನಂದರ 159ನೇ ಜನ್ಮದಿನವನ್ನು ಆಚರಿಸಲಾಯಿತು. “ವಿವೇಕಾನಂದರು ಭಾರತದ ಅತ್ಯಂತ ಪ್ರಸಿದ್ಧ ಹಾಗೂ ಪ್ರಭಾವಶಾಲಿ ತತ್ವಜ್ಞಾನಿಗಳಲ್ಲಿ ಒಬ್ಬರೂ. ಧರ್ಮ, ತತ್ವಶಾಸ್ರ್ತ, ಇತಿಹಾಸ, ಕಲೆ, ಸಮಾಜ, ವಿಜ್ಞಾನ, ಸಾಹಿತ್ಯ ಬಲ್ಲವರಾಗಿದ್ದರು. ಶಿಕ್ಷಣದ ಜೊತೆಗೆ ಭಾರತೀಯ ಶಾಸ್ತ್ರೀಯ ಸಂಗೀತದ ಜ್ಞಾನವನ್ನು ಹೊಂದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಿಜವಾದ ಭಾರತೀಯತೆಯ ಹುಡುಕಾಟದಲ್ಲಿರುವಾಗ ಇಲ್ಲಿನ ಶ್ರೇಷ್ಟತೆಯನ್ನು ಜಗತ್ತಿನಾದ್ಯಂತ ಎತ್ತಿಹಿಡಿದ ಧೀಮಂತ ವ್ಯಕ್ತಿತ್ವ ಸ್ವಾಮಿ ವಿವೇಕಾನಂದರದು. ನಿರ್ಭಯ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಕೋನ ಹೊಂದಿದ್ದರು. ಅವರು ಯುವಕರಿಗೆ ಸ್ಪೂರ್ತಿಯಾಗುವುದರಲ್ಲಿ ಯಾವುದರಲ್ಲೂ ಕಡಿಮೆಯಿರಲಿಲ್ಲ. ಅನೇಕ ಸಂದರ್ಭದಲ್ಲಿ ಅವರು ತಮ್ಮ ಸ್ಪೂರ್ತಿದಾಯಕ ಮಾತುಗಳಿಂದ ಯುವಕರನ್ನು ಪ್ರೋತ್ಸಾಹಿಸುತ್ತಿದ್ದರು. ಅದಕ್ಕಾಗಿಯೇ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. ಆದರೆ ಇಂದಿನ ಯುವ ಸಮೂಹ ಹೆಚ್ಚಿನ ಸಮಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಳೆದು ತಮ್ಮ ನಿಜವಾದ ಶಕ್ತಿ ಹಾಗೂ ಗುರಿಯನ್ನು ತಲುಪಲು ವಿಫಲವಾಗುತ್ತಿದೆ. ಸ್ವಾಮಿ ವಿವೇಕಾನಂದರ ವಿವೇಚನೆ, ಭಾರತೀಯತೆ , ಮಾನವೀಯತೆಯ ನಿಜವಾದ ಅರ್ಥವನ್ನು ವಿಂದು ಅಳವಡಿಸಿಕೊಳ್ಳಬೇಕಾಗಿದೆ.” ಎಂದು ಶ್ರೀರಾಮ ಪ್ರಾಥಮಿಕ ವಿಭಾಗದ ಅಧ್ಯಾಪಕರಾದ ವೇದಾವತಿ. ಕೆ ನುಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಕಾರ್ಯಕ್ರಮದಲ್ಲಿ 1 ರಿಂದ 7ನೇ ತರಗತಿಯ 180 ವಿದ್ಯಾರ್ಥಿಗಳು ವಿವೇಕಾನಂದರ ವೇಷ ಧರಿಸಿ ವೇದಿಕೆಯನ್ನು ಅಲಂಕರಿಸಿದ್ದರು. ಹಾಗೂ ಪ್ರಾಥಮಿಕ ವಿಭಾಗವು 33 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ 33 ವಿವೇಕಾನಂದರ ವೇಷಧಾರಿಗಳು 33 ವಿವೇಕವಾಣಿಯನ್ನು ಹೇಳಿದರು.

“ಅದೃಷ್ಟವಂತ ಎಂದರೆ ಅವಕಾಶಗಳನ್ನು ಪಡೆಯುವವನು, ಬುದ್ಧಿವಂತ ಎಂದರೆ ಅವಕಾಶಗಳನ್ನು ಸೃಷ್ಟಿಸಿಕೊಳ್ಳುವವನು ಎನ್ನುವಂತೆ ವಿವೇಕಾನಂದರು ಬಾಲ್ಯದಿಂದಲೇ ಅವಕಾಶಗಳನ್ನು ಸೃಷ್ಟಿಸಿಕೊಳ್ಳುತ್ತಾ ಆಧ್ಯಾತ್ಮ ವಿಷಯಗಳನ್ನು ಹೆಚ್ಚು ಅಧ್ಯಯನ ಮಾಡುತ್ತಾ ಸದ್ಗುಣಗಳನ್ನು ಮೈಗೂಡಿಸಿಕೊಂಡು ಬೆಳೆದರು. ರಾಮಕೃಷ್ಣ ಪರಮಹಂಸರನ್ನು ಗುರುವಾಗಿ ಸ್ವೀಕರಿಸಿ, ಸ್ವಾಮಿ ವಿವೇಕಾನಂದ ಎಂಬ ನಾಮಧೇಯದಿಂದ ವಿಶ್ವ ಪ್ರಸಿದ್ಧಿಯನ್ನು ಪಡೆದರು. ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿದ ವಿವೇಕಾನಂದರು, ಭಾರತದ ಸನಾತನ ಹಿಂದೂಧರ್ಮ, ವೇದ, ಯೋಗಗಳ ಬಗ್ಗೆ ಸಾಗರದಾಚೆಗೂ ಪ್ರಚಾರ ಮಾಡಿದ ಮೊದಲು ವ್ಯಕ್ತಿಯಾಗಿ ಪರಿಚಿತರಾದರು.

ಗಟ್ಟಿಮುಟ್ಟಾದ ನೂರು ಯುವಕರನ್ನು ಕೊಡಿ, ನವ ಭಾರತವನ್ನು ನಿರ್ಮಾಣ ಮಾಡುತ್ತೇನೆ ಎಂದಿದ್ದರು. ಹಾಗಾಗಿ ಅವರ ಜನ್ಮದಿನವನ್ನು ಯವದಿನವಾಗಿ ಆಚರಿಸಲಾಗುತ್ತದೆ ” ಎಂದು ಭಾರತ ದೇಶದ ಸಂಸ್ಕøತಿಯನ್ನು ವಿಶ್ವಕ್ಕೆ ಪಸರಿಸಿದ ವಿವೇಕಾನಂದರ ಬಾಲ್ಯ ಹಾಗೂ ಸಾಧನೆಯ ಬಗ್ಗೆ 4ನೇ ತರಗತಿಯ ನಿನಾದ್ ಕೈರಂಗಳ ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳು ಪ್ರೇರಣಾ ಗೀತೆ ಹಾಡಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಹಾಗೂ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ 4ನೇ ತರಗತಿಯ ಭೂಮಿಕಾ ಸ್ವಾಗತಿಸಿ, ರಾಜೇಶ್ವರಿ ನಿರೂಪಿಸಿ, ಧಾತ್ರಿ ವಂದಿಸಿದರು.