Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಜತ್ತೂರು ಗ್ರಾಮದ ವಿವಿಧ ರಸ್ತೆ ಅಭಿವೃಧ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೇರವೇರಿಸಿದ ಶಾಸಕ ಸಂಜೀವ ಮಠಂದೂರು- ಕಹಳೆ ನ್ಯೂಸ್

ಪುತ್ತೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಜತ್ತೂರು ಗ್ರಾಮದ ವಿವಿಧ ರಸ್ತೆ ಅಭಿವೃಧ್ಧಿ ಕಾಮಗಾರಿಗಳಿಗೆ 165 ಲಕ್ಷ ಅನುದಾನವನ್ನು ಮಂಜೂರು ಮಾಡಲಾಗಿದ್ದು, ಈ ಕಾಮಗಾರಿಗಳ ಶಿಲಾನ್ಯಾಸವನ್ನು ಶಾಸಕರಾದ ಸಂಜೀವ ಮಠಂದೂರುರವರು ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕರು, ಮಾನ್ಯ ಮುಖ್ಯ ಮಂತ್ರಿಗಳು ಪ್ರತೀ ಗ್ರಾಮದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ವಿಶೇಷ ಅನುದಾನವನ್ನು ಬಿಡುಗಡೆಮಾಡಿದ್ದು ಪ್ರತೀ ಗ್ರಾಮದ ರಸ್ತೆಗಳು ಕಾಂಕ್ರಿಟೀಕರಣಗೊಂಡು ಸಾರ್ವಕಾಲಿಕ ರಸ್ತೆಗಳಾಗಿ ಅಭಿವೃಧ್ಧಿ ಹೊಂದುತ್ತಿದೆ. ಗುಣಮಟ್ಟಕ್ಕೂ ಹೆಚ್ಚಿನ ಆದ್ಯತೆ ನೀಡಿ ನಡೆಸುವ ರಸ್ತೆ ಕಾಮಗಾರಿಗಳಿಂದಾಗಿ ಪ್ರತೀ ಗ್ರಾಮಗಳೂ ಹೆಚ್ಚಿನ ಅಭಿವೃಧ್ಧಿ ಹೊಂದುವಂತಾಗಲಿ ಎಂದು ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಭಾ.ಜ.ಪಾ. ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಮಾನ್ಯ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಮುಕುಂದ ಬಜತ್ತೂರು, ಶಕ್ತಿ ಕೇಂದ್ರದ ಅಧ್ಯಕ್ಷರು,ಪಂಚಾಯತ್ ಅಧ್ಯಕ್ಷರು, ಅಭಿವೃಧ್ಧಿ ಅಧಿಕಾರಿಗಳು, ಪಕ್ಷದ ಪ್ರಮುಖರು,ಕಾರ್ಯಕರ್ತರು,ಲೋಕೋಪಯೋಗಿ ಮತ್ತು PMGSY ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು