Sunday, November 24, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ನೈತಿಕ ಶಿಕ್ಷಣದ ಉಪನ್ಯಾಸ ಕಾರ್ಯಕ್ರಮ – ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯ ಬೆಳೆಸಬೇಕು – ಆಶಾ ಬೆಳ್ಳಾರೆ- ಕಹಳೆ ನ್ಯೂಸ್

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ನೈತಿಕ ಶಿಕ್ಷಣದ ಉಪನ್ಯಾಸ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಆಶಾ ಬೆಳ್ಳಾರೆ ಅವರು, “ಶಿಕ್ಷಣ ವ್ಯವಸ್ಥೆ ಆಧುನೀಕರಣಗೊಂಡಿದೆ. ಈ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢರಾಗಿ ಅವರಲ್ಲಿ ಅಭೂತಪೂರ್ವ ಬದಲಾವಣೆಯನ್ನು ತರಲು ಅವರಿಗೆ ನೈತಿಕ ಶಿಕ್ಷಣದ ಅಗತ್ಯವಿದೆ.ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣವನ್ನು ಕೇವಲ ಔಪಚಾರಿಕವಾಗಿ ಇಡದೇ ಅದನ್ನು ಸುವ್ಯವಸ್ಥಿತ ರೂಪದಲ್ಲಿ ಅಭಿವೃದ್ಧಿಪಡಿಸುವ ಕಾರ‍್ಯವನ್ನು ಕೈಗೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಎದುರಿಸಲು ಮತ್ತು ಪರಿಹರಿಸಲು ಬೇಕಾದ ಸರಿಯಾದ ಮಾರ್ಗವನ್ನು ಕಂಡುಕೊಳ್ಳುವಲ್ಲಿ ಸಮರ್ಥರಾಗಬೇಕು.ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಮುನ್ನಡೆಯುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು. ನೈತಿಕ ಶಿಕ್ಷಣವು ಭವಿಷ್ಯದ ವ್ಯಕ್ತಿತ್ವಕ್ಕೆ ಆಧಾರವನ್ನು ನೀಡುವ ಅಡಿಪಾಯವಾಗಿದೆ. ಸಮರ್ಥ ಸಮಾಜ ನಿರ್ಮಾಣಕ್ಕೆ ನೈತಿಕ ಶಿಕ್ಷಣ ಅಗತ್ಯ.”ಎಂದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಮತ್ತು ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಪನ್ಯಾಸಕರಾದ ಶ್ರೀಮತಿ ಮಧುರಾ ಸ್ವಾಗತಿಸಿ,ವಂದಿಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು