Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಹೆತ್ತ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಮಗ ಅರೆಸ್ಟ್- ಕಹಳೆ ನ್ಯೂಸ್

ಪುತ್ತೂರು : ಹೆತ್ತ ತಾಯಿಯ ಮೇಲೆ ಮಗನೇ ಅತ್ಯಾಚಾರ ಎಸಗಿರುವ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಎಂಬಲ್ಲಿ ನಡೆದಿದೆ.

ಆರೋಪಿಯನ್ನು ಜಯರಾಮ ರೈ ಎಂದು ಗುರುತಿಸಲಾಗಿದ್ದು, ಈತ ತನ್ನ ತಾಯಿ ಜೊತೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದ, ಆರೋಪಿ ಜನವರಿ 12ರಂದು 3 ಗಂಟೆ ನಸುಕಿನ ವೇಳೆ ತಾಯಿ ಮಲಗಿದ್ದ ಕೋಣೆಗೆ ತೆರಳಿ ಅತ್ಯಾಚಾರ ಎಸಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ತಾಯಿ ಕಿರುಚಿ, ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ. ಆರೋಪಿಯು ತಾಯಿಯ ಬಾಯಿಗೆ ಬಟ್ಟೆ ಒತ್ತಿ, ಬೊಬ್ಬೆ ಹಾಕದಂತೆ ಬೆದರಿಕೆ ಹಾಕಿದ್ದಾನೆ. ಅತ್ಯಾಚಾರದ ಬಳಿಕ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮರುದಿನ ಬೆಳಗ್ಗೆ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಆರೋಪಿಯು ಬಲವಂತದಿಂದ ಆಕೆಯನ್ನು ಮನೆಯ ಹಾಲ್‍ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ದೂರು ದಾಖಲಾಗಿದೆ. ಮಗನ ಕೃತ್ಯದಿಂದ ಅಸ್ವಸ್ಥಗೊಂಡ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಸಂಪ್ಯ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.