ಬಿಜೆಪಿ ವತಿಯಿಂದ ಮಂಗಳೂರಿನ ನದಿ ತೀರದಲ್ಲಿ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಮಾಹಿತಿ – ಕಹಳೆ ನ್ಯೂಸ್
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ, ದಕ್ಷಿಣ ಮಹಾ ಶಕ್ತಿಕೇಂದ್ರದ ಜಪ್ಪಿನ ಮೋಗರು 54 ನೇ ವಾರ್ಡಿನ ಕಡೆಕಾರು ನದಿ ತೀರದಲ್ಲಿ ವಾಸಿಸುತ್ತಿರುವ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಮಾಹಿತಿಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನಮ್ಮ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಧನಲಕ್ಷ್ಮಿ ಗಟ್ಟಿಯವರು ಮಕ್ಕಳನ್ನು ಉದ್ದೇಶಿಸಿ ಪ್ರಸ್ತುತ ಕಾಲದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ತಿಳಿ ಹೇಳಿದರು. ಮಕ್ಕಳು ಇದರ ಬಗ್ಗೆ ಎಚ್ಚೆತ್ತುಕೊಂಡು ಹೇಗೆ ತಮ್ಮನ್ನು ರೂಪಿಸಿಕೊಳ್ಳಬೇಕೆಂದು ಮಾಹಿತಿಯನ್ನು ಕೊಟ್ಟರು. ಈ ನಮ್ಮ ಕಾರ್ಯಕ್ರಮಕ್ಕೆ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಧನಲಕ್ಷ್ಮಿ ಗಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಪೂರ್ಣಿಮ ರಾವ್, ಮಂಡಲದ ಪ್ರಧಾನ ಕಾರ್ಯದರ್ಶಿಯಾದ ರೂಪ .ಡಿ. ಬಂಗೇರ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪೂರ್ಣಿಮ ಎಂ, ಸ್ಥಳೀಯ ಮ. ನ.ಪಾ ಸದಸ್ಯೆಯಾದ ವೀಣಾ ಮಂಗಳಾ, ಪ್ರಧಾನಕಾರ್ಯದರ್ಶಿಗಳಾದ ಹರಿಣಿ ಪ್ರೇಮ್, ನರ್ಮದಾ ರೈ ಮತ್ತು ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.