Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ವೃದ್ದ ಬಲಿ- ಕಹಳೆ ನ್ಯೂಸ್

ಮಂಗಳೂರು : ಹಿಮ್ಮುಖವಾಗಿ ಬಂದ ಪಿಕ್‍ಅಪ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಶಕ್ತಿನಗರದ ಕಕ್ಕೆಬೆಟ್ಟು ಕಾರ್ಮಿಕ ಕಾಲೋನಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮನೆಯ ಮುಂಭಾಗದ ಅಂಗಳದಲ್ಲಿ ವಯೋವೃದ್ಧ ಕೊರಗಪ್ಪ (85) ನಿಂತಿದ್ದ, ಸಂದರ್ಭದಲ್ಲಿ ಮೋಹನ್ ಎಂಬವರು ಫೆÇ್ಲೀರಿಂಗ್ ಟೈಲ್ಸ್ ತುಂಬಿಕೊಂಡ ಪಿಕ್ ಅಪ್ ನ್ನು ನಿರ್ಲಕ್ಷ್ಯವಾಗಿ ಗಮನಿಸದೆ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಕೊರಗಪ್ಪ ಅವರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ತಲೆಗೆ ಗಾಯವಾಗಿದ್ದು, ತಕ್ಷಣ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.

ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ನಿರ್ಲಕ್ಯವೇ ಅಪಘಾತಕ್ಕೆ ಕಾರಣವೆಂದು ಆರೋಪಿಸಲಾಗಿದೆ. ಪಿಕ್ ಅಪ್ ವಾಹನದ ಚಾಲಕ ಮೋಹನ್ ರವರ ವಿರುದ್ದ ಕಂಕನಾಡಿ ನಗರ ಠಾಣೆಯಲ್ಲಿ 05/2022 ಕಲಂ 304 (ಎ) ಐಪಿಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.