ಉಡುಪಿ: ನಾರಾಯಣ ಗುರುಗಳ ಸ್ತಬ್ದಚಿತ್ರ ನಿರಾಕರಣೆ ವಿಚಾರ : ಬೇಸರ ವ್ಯಕ್ತ ಪಡಿಸಿದ ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆ – ಕಹಳೆ ನ್ಯೂಸ್
ಉಡುಪಿ: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ತಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ನಿರಾಕರಿಸಿರುವ ಕುರಿತು ಉಡುಪಿಯ ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆ ಬೇಸರ ವ್ಯಕ್ತಪಡಿಸಿದೆ.
ಇಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ಎನ್.ಜಿ. ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು, “ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದವರು. ವಿದ್ಯಾಭ್ಯಾಸ ಕ್ರಾಂತಿಮಾಡಿದವರು. ಇಂತಹ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸಿರುವುದು ಹಿಂದುಳಿದ ಶೋಷಿತ ದಲಿತ ಗುರುಗಳಿಗೆ ಮತ್ತು ಸಮಾಜಕ್ಕೆ ಮಾಡಿದ ಅವಮಾನವಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವದ ಮೆರವಣಿಗೆಯ ಸಮಿತಿಯು ಅಂಗೀಕಾರ ಮಾಡುವ ಮೂಲಕ ಜ.26 ರಂದು ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಅವಕಾಶ ನೀಡಬೇಕು ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗೌರವವನ್ನು ನೀಡಬೇಕೆಂದು” ಒತ್ತಾಯಿಸಿದರು.
ಇದೇ ವೇಳೆ ಅವರು, ಹಿಂದುಳಿದ ವರ್ಗಕ್ಕೆ ಹಿಂದುತ್ವದ ಹೆಸರಿನಲ್ಲಿ ನಡೆಯುತ್ತಿರುವ ಸರಕಾರದಿಂದ ಮಣ್ಣನೆ ಸಿಗದಿರುವುದು ಬೇಸರ ತಂದಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಸ್.ಎನ್.ಜಿ ಉಡುಪಿ ಇದರ ಜಿಲ್ಲಾಧ್ಯಕ್ಷ ಜಗನಾಥ್ ಕೋಟೆ ಮತ್ತಿತ್ತರರು ಉಪಸ್ಥಿತರಿದ್ದರು.