Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಕೊರಗಜ್ಜನಿಗೆ ಅವಮಾನ ಪ್ರಕರಣ: ಇಬ್ಬರು ಬಂಧಿತ ಆರೋಪಿಗಳಿಗೆ ಜಾಮೀನು- ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕಿನ ಸಾಲೆತ್ತೂರು ಬಳಿ ಮದುವೆ ಮನೆಯಲ್ಲಿ ಕೊರಗಜ್ಜನ ವೇಷವನ್ನು ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಂಗಲ್ಪಾಡಿ ನಿವಾಸಿ, ಪುತ್ತೂರು ಫಾತಿಮಾ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್ (19) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಧಿತ ಆರೋಪಿಗಳನ್ನು ಅಂದೇ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರ ನ್ಯಾಯವಾದಿ ಶ್ರೀಕಾಂತ್ ಭಟ್ ವಾದ ಮಂಡಿಸಿದ್ದು, ಇದೀಗ ಜಾಮೀನು ದೊರೆತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು