Saturday, September 21, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೈಕ್ – ಮೊಬೈಲ್ ಸೇತುವೆಯಲ್ಲಿಟ್ಟು ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಕಹಳೆ ನ್ಯೂಸ್

ಬಂಟ್ವಾಳ : ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕಾರಾಜೆ ನಿವಾಸಿ ಜಲೀಲ್ (55) ಎಂದು ಗುರುತಿಸಲಾಗಿದ್ದು, ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೇತ್ರಾವತಿ ಸೇತುವೆಯಲ್ಲಿ ಬೈಕ್, ಚಪ್ಪಲಿ ಹಾಗೂ ಮೊಬೈಲ್ ಗಮನಿಸಿದ ಸ್ಥಳೀಯ ಈಜುಗಾರರು, ಯಾರು ಇಲ್ಲದ ಬಗ್ಗೆ ಸಂಶಯಗೊಂಡು ಸ್ಥಳದಲ್ಲಿದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಕಾರಾಜೆ ನಿವಾಸಿ ಜಲೀಲ್ ಎಂದು ಗುರುತು ಪತ್ತೆಯಾಗಿತ್ತು. ಬಳಿಕ ನದಿಯಲ್ಲಿ ಹುಡುಕಲು ಆರಂಭಿಸಿದರು. ತಡ ರಾತ್ರಿವರೆಗೂ ಹುಡುಕಿದಾಗ ವ್ಯಕ್ತಿಯ ಮೃತದೇಹ ಪತ್ತೆಯಾಗಿರಲಿಲ್ಲ.

ಜಾಹೀರಾತು

ಇಂದು ಮುಂಜಾನೆಯಿಂದ ಸ್ಥಳೀಯ ಈಜುಗಾರ ಸತ್ತಾರ್ ಹಾಗೂ ಮೊಹಮ್ಮದ್ ಅವರು ನದಿಯಲ್ಲಿ ಈಜಾಡಿ ಹುಡುಕಿದಾಗ ಶವ ಪತ್ತೆಯಾಗಿದೆ.
ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.