Recent Posts

Monday, April 7, 2025
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಮನೆಗೆ ಭೇಟಿ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಗಾಗಿ ಸಜೀಪಮುನ್ನೂರಿಗೆ ತೆರಳಿದ್ದ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.


ಈ ವೇಳೆ ಶಾಸಕರ ಜತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದ ಎ.ಸಿ.ಭಂಡಾರಿ ಅವರು, ನಂದಾವರ ದೇವಸ್ಥಾನದಲ್ಲಿ ತಾನು ಅಧ್ಯಕ್ಷನಾಗಿರುವ ವೇಳೆ ತಡೆಗೋಡೆ ಹಾಗೂ ಇತರ ಕಾರ್ಯಗಳಿಗೆ ಅನುದಾನ ನೀಡಿರುವುದಕ್ಕೆ ಕೃತಜ್ಞತೆ ಅರ್ಪಿಸಿ ಇದರಿಂದ ಭಕ್ತರಿಗೆ ಸಾಕಷ್ಟು ಪ್ರಯೋಜನವಾಗಿದೆ. ಮುಂದೆ ನೇತ್ರಾವತಿ ನದಿ ಕಿನಾರೆಯ ರಸ್ತೆಯೂ ಅನುಷ್ಠಾನವಾದರೆ ಇನ್ನಷ್ಟು ಭಕ್ತರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸಂತೋಷ್‌ಕುಮಾರ್ ಶೆಟ್ಟಿ ದಳಂದಿಲ, ಉದ್ಯಮಿ ವಿವೇಕ್ ಶೆಟ್ಟಿ ನಗ್ರಿಗುತ್ತು, ಚರಣ್ ಜುಮಾದಿಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ