Friday, November 22, 2024
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಾದ್ಯಂತ ವೀಕೆಂಡ್ ಕಫ್ರ್ಯೂ ರದ್ದು: ಮಹತ್ವದ ನಿರ್ಧಾರ ಕೈಗೊಂಡ ಸಿಎಂ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕಪ್ರ್ಯೂ ಹಾಗೂ ನೈಟ್ ಕಪ್ರ್ಯೂಗೆ ಬಗ್ಗೆ ಅನೇಕರು ಆಕ್ಷೇಪ ವ್ಯಕ್ತ ಪಡಿಸಿದ್ದು, ಇದೀಗ ಸರ್ಕಾರ 2 ವಾರಗಳಿಗೆ ವೀಕೆಂಡ್ ಕಪ್ರ್ಯೂವನ್ನು ರದ್ದುಗೊಳಿಸಿದೆ.

ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಕುರಿತ ತಜ್ಞರು, ಸಚಿವರ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯಾದ್ಯಂತ ವೀಕೆಂಡ್ ಕಫ್ರ್ಯೂ ತೆರವುಗೊಳಿಸುವಂತೆ ಸರ್ಕಾರಕ್ಕೆ ತಜ್ಞರು ಶಿಫಾರಸು ಮಾಡಿದ್ದಾರೆ ಎನ್ನಲಾಗಿದ್ದು, ನೈಟ್ ಕಪ್ರ್ಯೂ ಮುಂದುವರಿಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೊರೊನಾ ನಿಯಂತ್ರಣ ಸಭೆಯನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಲಾಗುತ್ತಿದ್ದು, ಈ ಸಭೆಯಲ್ಲಿ ಕೊರೊನಾ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಸಚಿವ ಆರ್ ಅಶೋಕ್, ಡಾ.ಕೆ.ಸುಧಾಕರ್, ಅರಗ ಜ್ಞಾನೇಂದ್ರ ಸೇರಿದಂತೆ ವಿವಿಧ ತಜ್ಞರು ಭಾಗವಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು