Recent Posts

Friday, November 22, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆಯ ನೇತೃತ್ವದಲ್ಲಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಇವರ ಸಹಯೋಗದೊಂದಿಗೆ, ಪೋಷನ್ ಅಭಿಯಾನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಮಹಿಳಾ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆಯ ನೇತೃತ್ವದಲ್ಲಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಇವರ ಸಹಯೋಗದೊಂದಿಗೆ, ಪೋಷನ್ ಅಭಿಯಾನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮವು ಮಹಾಶಕ್ತಿ ಕೇಂದ್ರ 1ರ ಬೊಳುವಾರು ‘ನವನೀತಂ’ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮವನ್ನು ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ಧನಲಕ್ಷ್ಮಿ ಗಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸದಾ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ನಾವು ಇಂತಹ ಭಾವನಾತ್ಮಕ ಸಂಬಂಧವನ್ನು ಹೆಚ್ಚಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸಂತಸವನ್ನು ತಂದಿರುತ್ತದೆ. ಜೊತೆಗೆ ಮಹಿಳೆಯರಿಗೆ ಮೋದಿಜಿ ಅವರ ಕನಸಿನ ಪೋಷನ್ ಪಕ್ವಾಡ ಅಭಿಯಾನದ ಮಹತ್ವವನ್ನು ತಿಳಿಸುತ್ತಾ, ಸರ್ಕಾರದ ಯೋಜನೆಗಳ ಮಾಹಿತಿಯನ್ನು ನೀಡುತ್ತಾ, ಪ್ರತಿಯೊಬ್ಬ ಕಾರ್ಯಕರ್ತರು ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.

ಪೌಷ್ಟಿಕಾಂಶದ ಬಗ್ಗೆ ಮಾಹಿತಿಯನ್ನು ನೀಡಲು ಆಗಮಿಸಿದಂತಹ ಹಿರಿಯ ಆರೋಗ್ಯ ಕಾರ್ಯಕರ್ತೆ ನಿಶಾ ಇವರು ದಿನನಿತ್ಯ ನಾವು ಅನುಸರಿಸಬೇಕಾದ ಆಹಾರ ಪದ್ಧತಿ, ಮಹಿಳೆಯರು ಹಾಗೂ ಮಕ್ಕಳಿಗೆ ಆರೋಗ್ಯ ವಿಚಾರವಾಗಿ ಸರ್ಕಾರದಿಂದ ಲಭಿಸುವ ಸೌಲಭ್ಯಗಳನ್ನು ಉಪಯೋಗಿಸಿ ಕೊಳ್ಳುವುದರ ಬಗ್ಗೆಯೂ ಸಂಪೂರ್ಣ ಮಾಹಿತಿಯನ್ನು ನೀಡಿ ಜಾಗೃತಿಯನ್ನು ಮೂಡಿಸಿದರು.

ಕಾರ್ಯಕ್ರಮದಲ್ಲಿ ಶಿಲ್ಪಾ, ನಿಶಾ, ಹಮ್ಷಾ ಎಂಬ ಮೂರು ಗರ್ಭಿಣಿ ಸ್ತ್ರೀಯರಿಗೆ ಸೀರೆಯೊಂದಿಗೆ ಅರಿಶಿನ-ಕುಂಕುಮ ಬಾಗಿನ ನೀಡಿ , ಇಮ್ಯೂನಿಟಿ ಕಷಾಯದ ಹುಡಿ , ಫಲವಸ್ತು ಸಿಹಿಯನ್ನು ನೀಡುವ ಮುಖೇನ ಸುಖ ಪ್ರಸವದ ಬಗ್ಗೆ ಶುಭಹಾರೈಸಲಾಯಿತು. Video : ಮಂಗಳೂರಿನಲ್ಲಿ ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್ ಮಾಡುತ್ತಿದ್ದ ಸತಿ ಪತಿ, ಸಿಸಿಬಿ ಪೊಲೀಸರ ವಶಕ್ಕೆ

ನಗರಸಭಾ ಸದಸ್ಯರಾದ ಶ್ರೀಮತಿ ಶಶಿಕಲಾ ಸಿ.ಎಚ್. ಇವರು ವಂದೇ ಮಾತರಂ ಗೀತೆಯನ್ನು ಹಾಡಿ , ಜಿಲ್ಲಾ ಕೋಶಾಧಿಕಾರಿಯಾದ ಶ್ರೀಮತಿ ಪ್ರೇಮಲತಾ ರಾವ್ ಸ್ವಾಗತಿಸಿದರು. ಪುತ್ತೂರು ನಗರ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ಶರಾವತಿ ರವಿನಾರಾಯಣ ವಂದನಾರ್ಪಣೆಗೈದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ತ್ರಿವೇಣಿ ಪೆರುವೋಡಿ, ಉಪಾಧ್ಯಕ್ಷರಾದ ಶ್ರೀಮತಿ ಪ್ರಭಾ ಆಚಾರ್ಯ, ಜಿಲ್ಲಾ ಕಾರ್ಯದರ್ಶಿಯಾದ ಜಯಂತಿ ನಾಯಕ್ ,ಜಿಲ್ಲಾ ಮಹಿಳಾ ಮೋರ್ಚಾದ ಪ್ರಭಾರಿಗಳಾದ ಗೀತಾ ರಾಮಣ್ಣ ಗೌಡ, ಮಂಡಲ ಮಹಿಳಾ ಮೋರ್ಚಾದ ಪ್ರಭಾರಿಗಳಾದ ಶ್ರೀಮತಿ ವಿದ್ಯಾ ಗೌರಿ, ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತೋಡಿ ಹಾಗೂ ಜಯಶ್ರೀ ಶೆಟ್ಟಿ ,ಮಂಡಲದ ಪ್ರಮುಖರು, ನಗರಸಭಾ ಸದಸ್ಯರು, ಮಹಿಳಾ ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರು, ಸಮಾಜದ ಗಣ್ಯರು ಹಾಗೂ ಮಹಿಳಾ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದರು.