ಮಂಗಳೂರು : ಹೆರಿಗೆಗೆಂದು ಬಂದಿದ್ದ ತಾಯಿ, ಮಗು ಸಾವು: ವೈದ್ಯಕೀಯ ನಿರ್ಲಕ್ಷ್ಯ ಆರೋಪ – ಕಹಳೆ ನ್ಯೂಸ್
ಮಂಗಳೂರು : ಹೆರಿಗೆಗೆಂದು ಬಂದಿದ್ದ ತಾಯಿ ಮತ್ತು ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಶುಕ್ರವಾರ ನಡೆದಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ.
ವಿಟ್ಲ ಮೂಲದ ಸವಿತಾ (33) ಎಂಬವರು ತುಂಬು ಗರ್ಭಿಣಿಯಾಗಿದ್ದು , ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಹೊಟ್ಟೆಯಲ್ಲಿದ್ದ ಮಗು ಮೃತ ಪಟ್ಟಿದೆ ಎಂದು ವೈದ್ಯರು ತಿಳಿಸಿದ್ದು, ಸಂಜೆಯವರೆಗೂ ಯಾವುದೇ ಅಗತ್ಯ ಕ್ರಮ ಕೈಗೊಳ್ಳದ ಆಸ್ಪತ್ರೆ ಸಿಬ್ಬಂದಿ, ಸಂಜೆ ವೇಳೆ ತಾಯಿ ಕೂಡ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಬೇಟಿ ನೀಡಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೆÇಲೀಸ್ ಆಯುಕ್ತ ಎನ್. ಶಶಿಕುಮಾರ್, “ಮೃತ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯ ಕಾರಣವಾಗಿದ್ದು ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ವೈದ್ಯರ ಜತೆ ಮಾತನಾಡುವಂತೆ ಸೂಚಿಸಿದ್ದೇನೆ. ಅವರು ವೈದ್ಯರೊಂದಿಗೆ ಮಾತನಾಡಿದ ಬಳಿಕ ನೀಡುವ ದೂರಿನಂತೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ