Recent Posts

Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಏ.27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.

ಏಪ್ರಿಲ್ 27ರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ ನಡೆಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ| ಡಿ.ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು 12,393 ಜೋಡಿ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 15ರೊಳಗೆ ಸ-ವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಪ್ ನಂ. 8147263422.