ಭುವನೇಶ್ವರ್ : ಮನೆಯ ಮುಂದೆ ಆಟವಾಡಿಕೊಂಡಿದ್ದ ಐದು ವರ್ಷದ ಪುಟ್ಟ ಬಾಲಕಿಯನ್ನ ಕಾಮಾಂಧ ಚಾಲಕನೋರ್ವ ಅತ್ಯಾಚಾರ ಮಾಡಿದ ಘಟನೆ ಒಡಿಶಾದ ಪುರಿ ಪಟ್ಟಣದಲ್ಲಿ ನಡೆದಿದೆ.
ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ಬಾಲಕಿಯನ್ನು ಮನೆಯ ಟೆರೇಸ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ.
ಮನೆಗೆ ಬಂದ ಬಾಲಕಿಯ ಅಮ್ಮ ಮಗಳ ಕಿರುಚಾಟವನ್ನು ಕೇಳಿ ಟೆರೇಸ್ ಗೆ ಹೋಗಿ ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆದರೆ ಅಲ್ಲಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಸಿಂಗ್, ಬಾಲಕಿಯ ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೇ ಈ ಕೃತ್ಯ ಎಸಗಿದ್ದು, ಆತ ಡ್ರೈವರ್ ವೃತ್ತಿ ಮಾಡುತ್ತಿದ್ದ ಎಂದು ಕುಟುಂಬದವರು ತಿಳಿಸಿದ್ದಾರೆ. ಬಾಲಕಿಯನ್ನು ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಆಕೆಯ ಸ್ಥಿತಿ ಚಿಂತಜನಕವಾದ್ದರಿಂದ ಕಟಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು