Saturday, September 21, 2024
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಚೈನೀಸ್ ಕುಕ್ ಜೊತೆ ಪರಾರಿಯಾಗಿದ್ದ ಎರಡು ಮಕ್ಕಳ ತಾಯಿ ಕುಂದಾಪುರದಲ್ಲಿ ಪತ್ತೆ – ಕಹಳೆ ನ್ಯೂಸ್

ಸುಳ್ಯ: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಎರಡು ಮಕ್ಕಳ ತಾಯಿ ಇದೀಗ ಕುಂದಾಪುರದಲ್ಲಿ ಪತ್ತೆಯಾಗಿದ್ದಾಳೆ.

ಕಳೆದ ನಾಲ್ಕು ತಿಂಗಳಿAದ ಸುಳ್ಯದ ಪೈಚಾರು ಸಂಸ್ಥೆಯೊ0ದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದ ಅಸ್ಸಾಂ ಮೂಲದ ಕೋಗನ್ ತಾತಿ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಜ.25ರಂದು ಏಕಾಏಕಿ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನನ್ವಯ ತನಿಖೆ ಆರಂಭಿಸಿದ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ಮಹಿಳೆಯ ಬಳಿ ಇದ್ದ ಮೊಬೈಲ್ ಫೋನ್ ಲೊಕೇಶನ್ ಟ್ರೇಸ್ ಮಾಡಿದಾಗ ಆಕೆ ಕುಂದಾಪುರದಲ್ಲಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.

ಜಾಹೀರಾತು

ಈ ಬಗ್ಗೆ ಕುಂದಾಪುರ ಪೊಲೀಸರಿಗೆ ಮಾಹಿತಿ ರವಾನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಕುಂದಾಪುರ ಪೊಲೀಸರು ಮಹಿಳೆಯನ್ನು ಆಕೆಯ ಪ್ರಿಯಕರ ಮೂಲತಃ ಅಸ್ಸಾಂನ ಮಂಗಳೂರು ಹೋಟೆಲ್ ಒಂದರಲ್ಲಿ ಚೈನೀಸ್ ಫುಡ್ ಮೇಕರ್ ಆಗಿ ಕೆಲಸ ಮಾಡುತ್ತಿದ್ದ, ಚಂದನ್ ಜೊತೆ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಬಳಿಕ ಆಕೆಯನ್ನು ತನ್ನ ಜೊತೆ ಕಳುಹಿಸಿ ಕೊಡುವಂತೆ ಪತಿ ಪೊಲೀಸರ ಬಳಿ ಹೇಳಿದಾಗ ಪತ್ನಿ ತಾನು ಪ್ರಿಯಕರ ಚಂದನ್ ಜೊತೆ ಇರುವುದಾಗಿ ಹೇಳಿಕೊಂಡಿದ್ದಾಳೆ. ಕೊನೆಗೂ ಬುದ್ಧಿವಾದ ಹೇಳಿದ ಕುಂದಾಪುರ ಪೊಲೀಸರು ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿಕೊಟ್ಟಿದ್ದಾರೆ. ಮತ್ತೆ ಸುಳ್ಯ ಪೊಲೀಸರು ಠಾಣೆಗೆ ಕರೆಸಿ ಮಾತುಕತೆ ನಡೆಸಿದ್ದಾರೆ.