ಮಂಗಳೂರು: ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು : ದಕ್ಷಿಣ ಕನ್ನಡದಲ್ಲಿ 12 ಶಾಲೆಗಳು ಬಂದ್- ಕಹಳೆ ನ್ಯೂಸ್
ಮಂಗಳೂರು: ಕರಾವಳಿಯಲ್ಲಿ ಶಾಲಾ ಮಕ್ಕಳಲ್ಲಿ ಕೊರೊನಾ ಸೊಂಕು ಹೆಚ್ಚಾಗಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 12 ಶಾಲೆಗಳನ್ನು ಬಂದ್ ಮಾಡಲಾಗಿದೆ.
ಮಂಗಳೂರಿನಲ್ಲಿ ಅತಿ ಹೆಚ್ಚು ಸೊಂಕು ಕಂಡು ಬಂದಿದ್ದು, ಆದರೆ ಆಸ್ಪತ್ರೆಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಸೊನ್ನೆ. ಶಾಲೆಯಲ್ಲಿ ಐದಕ್ಕಿಂತ ಹೆಚ್ಚು ಕೊವಿಡ್ ಪ್ರಕರಣ ದಾಖಲಾದರೆ ಶಾಲೆ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದರು. ಜ. 1 ರಿಂದ ಜ.27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ.
5 ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾದರೂ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.