Sunday, January 19, 2025
ಬೆಂಗಳೂರುರಾಜಕೀಯರಾಜ್ಯಸಂತಾಪಸುದ್ದಿ

ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು(ಜ.28): ಕರ್ನಾಟಕ ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದ್ಮಾವತಿ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಿ. ಎಸ್​ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. 2018ರಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ಮರಿಸ್ವಾಮಿ ಅಣ್ಣನ ಮಗ ಡಾ. ನೀರಜ್‌ ಅವರನ್ನು ಸೌಂದರ್ಯ ಮದುವೆಯಾಗಿದ್ದರು. ಮೃತ ಸೌಂದರ್ಯಗೆ ಒಂದು ಮಗು ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೌಂದರ್ಯ ಪತಿ ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹ ಇದೆ

ಜಾಹೀರಾತು
ಜಾಹೀರಾತು
ಜಾಹೀರಾತು