Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಸ್ ಚಾಲಕ ಆರೆಸ್ಟ್ – ಕಹಳೆ ನ್ಯೂಸ್

ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ದಯಾನಂದ(32) ಎಂದು ಗುರುತಿಸಲಾಗಿದ್ದು, ಮಂಗಳೂರು ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ದಯಾನಂದ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಎಂದು ಆರೋಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೋಕ್ಸೊ ಪ್ರಕರಣದಡಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು