Recent Posts

Monday, April 7, 2025
ದಕ್ಷಿಣ ಕನ್ನಡಸುದ್ದಿ

ಕುಪ್ಪೆಪದವು ಗ್ರಾಮ ಪಂಚಾಯತ್ ನಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪುಸ್ತಕಗೂಡನ್ನು ಲೋಕಾರ್ಪಣೆಗೊಳಿಸಿದ ಶಾಸಕ ಡಾ. ವೈ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕುಪ್ಪೆಪದವು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪುಸ್ತಕಗೂಡು ಇದನ್ನು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಲೋಕಾರ್ಪಣೆಗೊಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಸಂದರ್ಭದಲ್ಲಿ ಸ್ಚಚ್ಚತಾ ಭಿತ್ತಿಪತ್ರಗಳ ಅನಾವರಣವನ್ನು ಶಾಸಕರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು ಸಾರ್ವಜನಿಕರು ಮತ್ತು ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ಆ ಮೂಲಕ ಜೀವನ ರೂಪಿಸಬೇಕು. ಈಗ ಡಿಜಿಟಲ್ ಯುಗವಾಗಿರುವುದರಿಂದ ಕಂಪ್ಯೂಟರ್ ಬಳಕೆಯ ಸದುಪಯೋಗವನ್ನು ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಿಪಿ ಹಮ್ಮಬ್ಬ, ಉಪಾಧ್ಯಕ್ಷೆ ವಿಮಲ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಿರಣ್ ರಾಜ್, ಜಿಲ್ಲಾ ಗ್ರಂಥಾಲಯಾಧಿಕಾರಿ ಗಾಯತ್ರಿ, ಪಂಚಾಯತ್ ಪಿಡಿಒ ಸವಿತಾ ಮಂದೋಲಿಕರ್, ಕಾರ್ಯದರ್ಶಿ ನವೀನ್, ಪ್ರಭಾರ ಕಾರ್ಯದರ್ಶಿ ಇಸ್ಮಾಯಿಲ್, ಗ್ರಾಮ ಪಂಚಾಯತ್ ಸದಸ್ಯರಾದ ನಿತೇಶ್ ಕುಮಾರ್, ಮಂಜುಳಾ, ವಿನೋದ್, ವಿಜಯ, ಪುಷ್ಪಾ, ಅವರ ಜೊತೆ ಸ್ಥಳೀಯ ಭಾಗದ ಪ್ರಮುಖರು ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ