Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಮೂಲದ ಯುವತಿಯ ಫೋಟೋ ಯೂಟ್ಯೂಬ್ ನಲ್ಲಿ ದುರ್ಬಳಕೆ: ದಂಪತಿಗಳಿಬ್ಬರ ಬಂಧನ – ಕಹಳೆ ನ್ಯೂಸ್

ಬಂಟ್ವಾಳ: ಯುವತಿಯೊಬ್ಬಳ ಫೋಟೋವನ್ನು ಯೂಟ್ಯೂಬ್ ಚಾನೆಲ್ ಮೂಲಕ ದುರ್ಬಳಕೆ ಮಾಡಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಶಿವಮೊಗ್ಗ ಮೂಲದ ಸಾಪ್ಟ್ ವೇರ್ ದಂಪತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಸಾಪ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಹರೀಶ್ ಮತ್ತು ಅನೂಷಾ ದಂಪತಿಗಳು ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಶಿವಮೊಗ್ಗದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ದಂಪತಿಗಳು “ಕನ್ನಡ ಲೈಟ್” ಎಂಬ ಯೂಟ್ಯೂಬ್ ಚಾನೆಲ್ ಒಂದನ್ನು ತಯಾರಿಸಿ ಸಮಾಜದಲ್ಲಿ ನಡೆಯುವ ಘಟನೆಗಳಿಗೆ ಸಂಬ0ಧಿಸಿದ0ತೆ ವಿಡಿಯೋಗಳನ್ನು ವೈಭವೀಕರಿಸಿ ಅಪ್ ಲೋಡ್ ಮಾಡುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅದರಂತೆ ಬಂಟ್ವಾಳದ ಯುವತಿಯೊಬ್ಬಳ ಫೋಟೋ ದುರ್ಬಳಕೆ ಮಾಡಿಕೊಂಡಿರುವ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆ ನಡೆಸಿದ ನಗರ ಠಾಣಾ ಎಸ್ಸೈ ಅವಿನಾಶ್ ನೇತೃತ್ವದ ತಂಡ ಶಿವಮೊಗ್ಗದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು