Recent Posts

Sunday, January 19, 2025
ಹೆಚ್ಚಿನ ಸುದ್ದಿ

ರಾಜಕಾರಣಿಯೋರ್ವನ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – ಕಹಳೆ ನ್ಯೂಸ್

ವಿಜಯವಾಡ : 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ರಾಜಕಾರಣಿಯೋರ್ವನ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಒಂಭತ್ತನೇ ತರಗತಿ ಓದುತ್ತಿರುವ ಹದಿನಾಲ್ಕು ವರ್ಷದ ಬಾಲಕಿ 4 ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದಾಳೆ. ಡೆತ್ ನೋಟ್ ನಲ್ಲಿ “ಟಿಡಿಪಿ ಮುಖಂಡ ವಿನೋದ್ ಜೈನ್ ಎಂಬಾತ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಬಾಲಕಿ ಬರೆದಿದ್ದಾಳೆ.
ಡೆತ್ ನೋಟ್‍ನ ಆಧಾರದಲ್ಲಿ ಆರೋಪಿ ವಿನೋದ್ ಜೈನ್‍ನನ್ನು ಬಂಧಿಸಿರುವ ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು