Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ತೃತೀಯ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಹಿತ್ಯ ಮಂಟಪ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಒಬ್ಬ ವ್ಯಕ್ತಿಯ ಸೃಜನಾತ್ಮಕ ಪ್ರತಿಭೆಯನ್ನು ಹೊರತೆಗೆಯಲು ಸಾಹಿತ್ಯ ಮಂಟಪ ಒಂದು ಉತ್ತಮ ವೇದಿಕೆ. ವ್ಯಕ್ತಿಯು ತನ್ನ ಅನುಭವಗಳನ್ನು, ಭಾವನೆಗಳನ್ನು ಸಾಹಿತ್ಯ ರೂಪಕ್ಕೆ ತರುವ ಪ್ರಯತ್ನ ಮಾಡಬೇಕು. ಸಾಹಿತ್ಯ ಮಂಟಪ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದೆ. ಕಾಲೇಜಿನಲ್ಲಿ ಸಿಗುವ ಸಮಯ, ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಲ್ಲಿನ ವಿವೇಕಾನಂದ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕಿ ರೇಖಾ ಪಿ. ಎಂ. ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಕಾಲೇಜಿನ ತೃತೀಯ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ ಸಾಹಿತ್ಯ ಮಂಟಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕನ್ನಡ ವಿಭಾಗದ ಉಪನ್ಯಾಸಕಿ ಗಾಯತ್ರಿ ಮಾತನಾಡಿ, ಸಾಹಿತ್ಯ ಸಂಘದ ಮೂಲಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕಾಲೇಜಿನಲ್ಲಿ ಎಲ್ಲ ರೀತಿಯ ಅವಕಾಶಗಳಿವೆ. ಸಾಹಿತ್ಯ ಮಂಟಪವು ಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಹಾಯಕವಾಗುವುದು ಎಂದು ನುಡಿದರು. ಕನ್ನಡ ಸಂಘದ ಸಂಯೋಜಕಿ ಮತ್ತು ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಗೀತಾ ಕುಮಾರಿ ಟಿ. ಮಾತನಾಡಿ, ಹೊಸತನ್ನು ಕಲಿಯಲು ಸಾಹಿತ್ಯ ಮಂಟಪ ಸಹಕಾರಿ. ಇಲ್ಲಿ ಎಲ್ಲಾ ವಿಭಾಗದ ಆಸಕ್ತ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ. ಈ ವೇದಿಕೆಯನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡು ಬೆಳೆಯಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಯುವ ಕವಿಗಳಾದ ದೀಪ್ತಿ ಅಡ್ಡಂತಡ್ಕ, ಸುಮನ ನಾಯಕ್, ದೀಕ್ಷಿತ, ಶುಭ್ರ ಪುತ್ರಕಳ ಅವರವ ಕವನ, ಲೇಖನವನ್ನು ವೇದಿಕೆಯಲ್ಲಿ ವಾಚಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಕಾರ್ಯದರ್ಶಿ ಸಂದೀಪ್ ಎಸ್. ಮಂಚಿಕಟ್ಟೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ತೃತೀಯ ಐಚ್ಚಿಕ ಕನ್ನಡ ವಿದ್ಯಾರ್ಥಿಗಳಾದ ಸ್ವಾತಿ ಎಂ. ಪ್ರಾರ್ಥಿಸಿದರು. ಯಶ್ವಿತಾ ಪಿ. ಸ್ವಾಗತಿಸಿ, ಕೃತಿಕಾ ವಂದಿಸಿದರು. ಶ್ವೇತಾ ಕಾರ್ಯಕ್ರಮವನ್ನು ನಿರೂಪಿಸಿದರು.