Sunday, January 19, 2025
ದಕ್ಷಿಣ ಕನ್ನಡಸುದ್ದಿ

ಟ್ಯಾಕ್ಸಿ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತಗೊಂಡು ಚಾಲಕ ಸಾವು- ಕಹಳೆ ನ್ಯೂಸ್

ಮಂಗಳೂರು : ಟ್ಯಾಕ್ಸಿ ಚಲಾಯಿಸುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗೀ ಟ್ಯಾಕ್ಸಿ ಚಾಲಕ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಚಾಲಕ ಮೊಹಮ್ಮದ್ ಶರೀಫ್ ನಗರದ ಮಂಗಳಾದೇವಿಯಲ್ಲಿ ಕಾರು ಚಲಾಯಿಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ. Breaking News : ರಾಷ್ಟ್ರಗೀತೆಗೆ ಅಗೌರವ ; ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಸಮನ್ಸ್ ಜಾರಿ ಮಾಡಿದ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರನ್ನು ನಿಲ್ಲಿಸಲು ಸಾಧ್ಯವಾಗದೆ ಇವರ ಕಾರು ಟೆಂಪೋಗೆ ಡಿಕ್ಕಿ ಹೊಡೆದಿದೆ. ಸ್ವಲ್ಪದರಲ್ಲಿ ಬಸ್ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದು ತಪ್ಪಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಹೆಚ್ಚಿನ ಅವಘಡ ಸಂಭವಿಸಿಲ್ಲ. ಕಾರಿನಲ್ಲಿ ಮೂರ್ಛೆ ತಪ್ಪಿದ್ದ ಮೊಹಮ್ಮದ್ ಶರೀಫ್‌ರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ? ಸಂಪುಟ ವಿಸ್ತರಣೆಗೆ ಸಿಗುತ್ತಾ ವರಿಷ್ಠರ ಗ್ರೀನ್ ಸಿಗ್ನಲ್ ; ಯಾರೆಲ್ಲ ಸಚಿವಾಕಾಂಕ್ಷಿಗಳು?

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಮಂಗಳೂರು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.