Recent Posts

Sunday, January 19, 2025
ರಾಜಕೀಯರಾಷ್ಟ್ರೀಯಸುದ್ದಿ

ರಾಷ್ಟ್ರಗೀತೆಗೆ ಅಗೌರವ ; ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಸಮನ್ಸ್ ಜಾರಿ ಮಾಡಿದ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ – ಕಹಳೆ ನ್ಯೂಸ್

ಮುಂಬೈ, ಫೆ 03 : ರಾಷ್ಟ್ರಗೀತೆಯನ್ನು ಅವಮಾನಿಸಿದ ಆರೋಪದ ಮೇಲೆ ಮಾರ್ಚ್ 2 ರೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮುಂಬೈನ ಮಜಗಾಂವ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚಿಸಿ ಬುಧವಾರ ಸಮನ್ಸ್ ಜಾರಿ ಮಾಡಿದೆ.


ಡಿಸೆಂಬರ್ 1, 2021 ರಂದು ಮುಂಬೈಗೆ ಭೇಟಿ ನೀಡಿದ ಸಂದರ್ಭದಲ್ಲಿ ಲೇಖಕ-ಕವಿ ಜಾವೇದ್ ಅಖ್ತರ್ ಅವರು ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಮುಖ್ಯ ಭಾಷಣಕಾರರಾಗಿದ್ದ ಮಮತಾ ಬ್ಯಾನರ್ಜಿ ರಾಷ್ಟ್ರಗೀತೆ ಆರಂಭವಾದಾಗ ಎದ್ದು ನಿಲ್ಲದೇ ಕುಳಿತುಕೊಂಡಿದ್ದರು. ನಂತರ ಎದ್ದುನಿಂತು ಎರಡು ಸಾಲುಗಳನ್ನು ಹಾಡಿ ಥಟ್ಟನೆ ನಿಲ್ಲಿಸಿದ್ದರು. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಕಾರ್ಯಕಾರಿ, ವಕೀಲ ವಿವೇಕಾನಂದ ಗುಪ್ತಾ ಅವರು ರಾಷ್ಟ್ರೀಯ ಗೌರವಗಳಿಗೆ ಅವಮಾನ ತಡೆ ಕಾಯಿದೆ 1971 ರ ಸೆಕ್ಷನ್ 3 ರ ಅಡಿಯಲ್ಲಿ ಅವರ ವಿರುದ್ಧ ದೂರು ದಾಖಲಿಸಿ ಸಿಎಂ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಗುಪ್ತಾ ಅವರು ನ್ಯಾಯಾಲಯಕ್ಕೆ ನೀಡಿದ ದೂರಿನಲ್ಲಿ ಬ್ಯಾನರ್ಜಿ “ರಾಷ್ಟ್ರಗೀತೆಗೆ ಸಂಪೂರ್ಣ ಅಗೌರವ” ತೋರಿದರು ಮತ್ತು ಅವರು ಗೀತೆಯನ್ನು ನಿಲ್ಲಿಸಿದ ನಂತರ ತಕ್ಷಣವೇ ಸ್ಥಳದಿಂದ ನಿರ್ಗಮಿಸಿದರು ಎಂದು ಹೇಳಿದ್ದಾರೆ

ನ್ಯಾಯಾಲಯದಲ್ಲಿ ಗುಪ್ತಾ ಅವರು “ಆರೋಪಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರೂ, ಅವರು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಲಿಲ್ಲ” ಎಂದು ವಾದಿಸಿದ್ದಾರೆ.