Sunday, January 19, 2025
ಹೆಚ್ಚಿನ ಸುದ್ದಿ

ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ ದುರುಳ ತಂದೆಯ ಬಂಧನ..!! – ಕಹಳೆ ನ್ಯೂಸ್

ಶಿವಮೊಗ್ಗ : ಮಗಳ ಮೇಲೆಯೇ ನಿರಂತರ ಅತ್ಯಾಚಾರ ನಡೆಸುತ್ತಿದ್ದ ದುಷ್ಟ ತಂದೆಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಶಿವಮೊಗ್ಗದ ಗೋವಿಂದಪುರದಲ್ಲಿ ನಡೆದಿದೆ.

ಮೂಲತಃ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ನಿವಾಸಿಯಾಗಿರುವ ಆರೋಪಿ ತನ್ನ ಗ್ರಾಮದಲ್ಲಿಯೇ ಶುಂಠಿ ವ್ಯಾಪಾರ ಮಾಡಿಕೊಂಡಿದ್ದ. ಈತನಿಗೆ ಮಗಳು ಸೇರಿದಂತೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ದುರುಳ ತಂದೆ, ಮಗಳ ಮೇಲೆ ಕಳೆದ ಹಲವು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗುತ್ತಿದ್ದು, ತನ್ನ ತಂದೆಯ ದುಷ್ಕøತ್ಯವನ್ನು ಮಗಳು ತಾಯಿಗೂ ಹೇಳದೆ ಸಹಿಸಿಕೊಂಡಿದ್ದಳು.

ಜಾಹೀರಾತು
ಜಾಹೀರಾತು
ಜಾಹೀರಾತು

ತಾಯಿ ಮಗಳಿಗೆ ಬೆದರಿಕೆ ಹಾಕಿದ್ದ ಆರೋಪಿಯ ಈ ಹಿಂಸೆಯನ್ನು ಸಹಿಸಿಕೊಂಡ ತಾಯಿ ಕೆಲವು ಸಮಯದ ನಂತರ ಸಂಬಂಧಿಕರಿಗೆ ವಿಷಯ ತಿಳಿಸಿದ್ದಾಳೆ. ಬಳಿಕ ಅವರ ಸಹಾಯದಿಂದ ಶಿವಮೊಗ್ಗ ಮಹಿಳಾ ಪೊಲೀಸರಿಗೆ ವಿಷಯ ತಿಳಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.