Recent Posts

Sunday, January 19, 2025
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಶೀಘ್ರವೇ ಅಧಿಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8 ನೇ ತರಗತಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್. ವಿಶಾಲ್ ಅವರು ಡಿಡಿಪಿಐಗಳಿಗೆ ಈ ಸಂಬಂಧ ಸೂಚನೆ ನೀಡಿದ್ದು, ಕಲ್ಯಾಣ ಕರ್ನಾಟಕದ 6 ಶೈಕ್ಷಣಿಕ ಜಿಲ್ಲೆಗಳ ಶಾಲೆಗಳಿಗೆ ಒಟ್ಟು 5000 ಹುದ್ದೆಗಳು ಹಾಗೂ ಉಳಿದ 28 ಜಿಲ್ಲೆಗಳಿಗೆ 10,000 ಸೇರಿ 15 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಆದೇಶವನ್ನು ಕಾಯ್ದಿರಿಸಿ, ಡಿಡಿಪಿಐಗಳ ಹಂತದಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಅಗತ್ಯ ಪೂರ್ವ ಸಿದ್ಧತೆಗಳಿಗೆ ಕ್ರಮ ವಹಿಸಲು ಹೇಳಿದ್ದಾರೆ.

 

ಡಿಡಿಪಿಐಗಳು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿನ 6 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಶಿಕ್ಷಣ ಹಕ್ಕು ಕಾಯ್ದೆ ನಿಯಮಾನುಸಾರ ವಿಷಯವಾರು, ಶಾಲಾವಾರು, ತಾಲೂಕುವಾರು ಹುದ್ದೆಗಳನ್ನು ವರ್ಗೀಕರಣ ಮಾಡಿ ಗುರುತಿಸಿಕೊಂಡು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.