Friday, November 22, 2024
ದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯ ಕ್ಷೇತ್ರದಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಉದ್ಘಾಟನೆ – ಕಹಳೆ ನ್ಯೂಸ್

ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯ ಕ್ಷೇತ್ರದಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಉದ್ಘಾಟನೆಗೊಂಡಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶಾರದಾ ರೈ, ಕಣಿಯೂರು ವಲಯ ಒಕ್ಕೂಟದ ಅಧ್ಯಕ್ಷರಾದ ರಾಮಾನಂದ, ರುಕ್ಮಯ್ಯ ಪೂಜಾರಿ, ಕಣಿಯೂರು ವಲಯದ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮಾ ಮೈರೋಳ್ತಡ್ಕ, ಬಂದಾರು ಒಕ್ಕೂಟದ ಅಧ್ಯಕ್ಷರಾದ ಕೃಷ್ಣಯ್ಯ ಆಚಾರ್ , ಶ್ರೀಲತಾ ಹಾಗೂ ಒಕ್ಕೂಟ ದ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಬಂದಾರು ಸೇವಾಪ್ರತಿನಿಧಿ ನಿರಂಜನ್ ಸ್ವಾಗತಿಸಿ, ಮೈರೋಳ್ತಡ್ಕ ಸೇವಾ ಪ್ರತಿನಿಧಿ ಶ್ರೀಮತಿ ಚಂದ್ರಕಲಾ ಧನ್ಯವಾದಗೈದರು.