Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಅಪಾರ್ಟ್‍ಮೆಂಟ್‍ನಲ್ಲಿ ವೇಶ್ಯಾವಾಟಿಕೆ…! ದಂಧೆಯ ಕಿನ್ ಪಿನ್ ಆಂಟಿ ಶಮೀನಾ ಸಹಿತ ಮೂರು ಮಂದಿ ಅಂದರ್…! – ಕಹಳೆ ನ್ಯೂಸ್

ಮಂಗಳೂರು, ಫೆ 03 : ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರ ಸಹಿತ ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ . ಶಶಿಕುಮಾರ್ ತಿಳಿಸಿದ್ದಾರೆ.


 

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜೊಂದರ ಮುಖ್ಯಸ್ಥೆ ಮತ್ತು ಸಂತ್ರಸ್ತೆ ಮಹಿಳಾ ಮತ್ತು ಕಲ್ಯಾಣ ಇಲಾಖೆ ನೀಡಿದ ದೂರಿನ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವು ದಿನಗಳಿಂದ ದಂಧೆ ನಡೆಸುತ್ತಿದ್ದ ಮಹಿಳೆಯರು ಮತ್ತು ಪುರುಷನನ್ನ ವಶಕ್ಕೆ ಪಡೆದಿದ್ದು, ಆರೋಪಿಗಳ ವಿರುದ್ದ ಪೋಕ್ಸೋ ಸೇರಿ ಇತರ ಕಾಯಿದೆಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಇನ್ನು ವಯಸ್ಕ ಯುವತಿಯರನ್ನು ನಿರಂತರವಾಗಿ ದಂಧೆಗೆ ಬಳಸಿಕೊಳ್ಳುತ್ತಿರುವುದು ತನಿಖೆ ವೇಳೆ ಕಂಡು ಬಂದಿದ್ದು, ರಕ್ಷಣೆ ಮಾಡಲಾದ ಸಂತ್ರಸ್ತೆಯರು ಪಿಯುಸಿ ವಿದ್ಯಾರ್ಥಿನಿಯರಾಗಿದ್ದು, ತಮ್ಮ ಮೇಲಾದ ದೌರ್ಜನ್ಯವನ್ನು ಕಾಲೇಜಿನ ಮುಖ್ಯಸ್ಥೆಯ ಬಳಿ ಹೇಳಿಕೊಂಡಿದ್ದಾರೆ.

ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದ ಮನೆಯಲ್ಲಿ ಸಿಸಿಟಿವಿ ಅಳವಡಿಸಿ ವಿದ್ಯಾರ್ಥಿನಿಯರಿಗೆ ವಿಡಿಯೋ ಬಯಲು ಮಾಡಿ ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

 

ಇನ್ನು ಕೇರಳ ಮೂಲದ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಮಹಿಳಾ ಪೊಲೀಸ್ ಠಾಣೆಯ ಸಖಿ ಕೇಂದ್ರದಲ್ಲಿ ಬಾಲಕಿಯರಿಗೆ ಕೌನ್ಸಲಿಂಗ್ ಮಾಡಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್ . ಶಶಿಕುಮಾರ್ ತಿಳಿಸಿದ್ದಾರೆ.