Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಬೆಳ್ತಂಗಡಿ : ಫೆ.19 ಮತ್ತು 20ರಂದು ಮರೋಡಿ ಗ್ರಾಮದ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವವು ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದರ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯಲ್ಲಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬಿಡುಗಡೆಗೊಳಿಸಿದರು.
ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಮರೋಡಿ ದೇರಾಜೆಬೆಟ್ಟದ ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನವು 250 ವರ್ಷಗಳ ಹಿಂದೆ ಪಾಳುಬಿದ್ದಿತ್ತು , ಸುಮಾರು 38 ವರ್ಷಗಳ ಹಿಂದೆ ಇಲ್ಲಿ ನೇಮೋತ್ಸವ ನಡೆಸಿರುವ ವಿಚಾರ ಊರ ಕೆಲವು ಹಿರಿಯರಿಗೆ ತಿಳಿದಿದ್ದು ಇದರ ಕುರುಹುಗಳು ಕ್ಷೇತ್ರದಲ್ಲಿ ಪತ್ತೆಯಾಗಿತ್ತು.

ಇದೀಗ ಕ್ಷೇತ್ರವನ್ನು ಊರ ಪರವೂರ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರಗೊಳಿಸಲಾಗಿದ್ದು ಇದೇ ಫೆಬ್ರವರಿ 19 ಹಾಗೂ 20 ರಂದು ಶ್ರೀ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ 108 ಕಲಶ ಸಹಿತ ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವವು ನಡೆಯಲಿದೆ.

ಆಮಂತ್ರಣ ಪತ್ರಿಕೆಯ ಬಿಡುಗಡೆಗೂ ಮೊದಲು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಹಾಗೂ ಬೆಳ್ಳಿಬೀಡು ಶ್ರೀ ಪಾರ್ಶ್ವನಾಥ ಬಸದಿಯಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಹೇಮರಾಜ್.ಕೆ. ಬೆಳ್ಳಿಬೀಡು, ಕಾರ್ಯದರ್ಶಿ ನಾರಾಯಣ ಪೂಜಾರಿ ಉಚ್ಚೂರು, ಸುರೇಂದ್ರ ಬಳ್ಳಾಲ್ ಮಲ್ಲಾರ ಬೀಡು ,ಸುದರ್ಶನ್ ಜೈನ್ ಪಾಂಡಿಬೆಟ್ಟು ಗುತ್ತು,ಜಿನೇಂದ್ರ ಜೈನ್ ಹರಂಬೆಟ್ಟು ಗುತ್ತು, ಜಯವರ್ಮ ಬುಣ್ಣು ಕುಕ್ಕೆರಬೆಟ್ಟು ಗುತ್ತು,ಆದಿತ್ಯ ಪಿ.ಕೆ ಮತ್ತೊಟ್ಟು,ವಿಜಯ ಬಂಗ,ವಿಶುಕುಮಾರ್ ಜೈನ್,ಇನ್ನಿತರರು ಉಪಸ್ಥಿತರಿದ್ದರು.