Sunday, January 19, 2025
ಸಂತಾಪಸುದ್ದಿ

ಹಾಡು ನಿಲ್ಲಿಸಿದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ – ಕಹಳೆ ನ್ಯೂಸ್

ಮುಂಬೈ : ಭಾರತ ರತ್ನ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ನ್ಯುಮೋನಿಯಾದಿಂದ ಬಳಲುತ್ತಿದ್ದ ಲತಾ ಮಂಗೇಶ್ಕರ್ ಜನವರಿ 8ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಕೊರೊನಾ ಸೋಂಕು ಕೂಡ ದೃಢಪಟ್ಟಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದೋರ್ ನಲ್ಲಿ 1929ರಲ್ಲಿ ಜನಿಸಿದ ಲತಾ ಮಂಗೇಶ್ಕರ್ ಪ್ರಾಥಮಿಕವಾಗಿ ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿ ಮೂವತ್ತಾರುಕ್ಕೂ ಹೆಚ್ಚು ಭಾರತೀಯ ಭಾಷೆಗಳು ಮತ್ತು ಕೆಲವು ವಿದೇಶಿ ಭಾಷೆಗಳಲ್ಲಿ ಹಾಡುಗಳನ್ನು ಹಾಡಿ ಮನೆ ಮಾತಾಗಿದ್ದರು.
ಭಾರತ ಸರ್ಕಾರವು 1989ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲತಾ ಮಂಗೇಶ್ಕರ್ ಅವರಿಗೆ ನೀಡಿ ಗೌರವಿಸಿದೆ. ಹಾಗೂ 2001ರಲ್ಲಿ ದೇಶಕ್ಕೆ ಲತಾ ಮಂಗೇಶ್ಕರ್ ಅವರ ಕೊಡುಗೆಗಳನ್ನು ಗುರುತಿಸಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡಲಾಯಿತು.