Sunday, November 24, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕನಪಾಡಿ – ದೇವಂದಬೆಟ್ಟು ರಸ್ತೆ ಡಾಮರೀಕರಣಕ್ಕೆ ಗುದ್ದಲಿಪೂಜೆ- ಕಹಳೆ ನ್ಯೂಸ್

ಬಂಟ್ವಾಳ : ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ದೇವಸ್ಥಾನದ ವತಿಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳ ಬೇಡಿಕೆಯನ್ನು ಒಳಗೊಂಡ ಮನವಿಯನ್ನು ಶಾಸಕ ರಾಜೇಶ್ ನಾಯ್ಕ್ ಅವರಿಗೆ ಸಲ್ಲಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅದರಲ್ಲಿ ಬ್ರಹ್ಮಕಲಶ ಸಂದರ್ಭ ವಾಹನಗಳಿಗೆ ಏಕಮುಖ ಸಂಚಾರ ಕಲ್ಪಿಸುವ ಸಲುವಾಗಿ ದೇವಂದಬೆಟ್ಟು-ಕನಪಾಡಿ-ಮಾಡಂಗೆ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಬೇಕಾಗಿ ವಿನಂತಿಸಲಾಗಿತ್ತು. ಈ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರು 15 ಲಕ್ಷ ರೂ ಅನುದಾನ ಒದಗಿಸಿದ್ದರು. ಇದರಲ್ಲಿ ಮಾಡಂಗೆ-ಕನಪಾಡಿ ರಸ್ತೆ ಕಾಂಕ್ರೀಟಿಕರಣಗೊಳಿಸಲಾಗಿತ್ತು.

ಇದೀಗ ಬಾಕಿ ಉಳಿದಿರುವ ಕನಪಾಡಿ-ದೇವಂದಬೆಟ್ಡು ಒಳರಸ್ತೆ ಡಾಮರೀಕರಣಗೊಳಿಸಲು ಹೆಚ್ಚುವರಿಯಾಗಿ ಅನುದಾನ ಒದಗಿಸಿದ್ದು, ಇಂದು ಈ ರಸ್ತೆಗೆ ಕಳ್ಳಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಾಮೋದರ ನೆತ್ತರಕೆರೆ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಸಂದರ್ಭದಲ್ಲಿ ಕಳ್ಳಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಮನೋಜ್ ವಳವೂರು, ಬ್ರಹ್ಮಕಲಶ ಸಮಿತಿ ಉಪಾಧ್ಯಕ್ಷರಾದ ಯೋಗೀಶ್ ದರಿಬಾಗಿಲು, ಕಾರ್ಯದರ್ಶಿ ದೇವಿಪ್ರಸಾದ್ ಎಂ ದೇವಂದಬೆಟ್ಟು, ಮತ್ತಿತರರು ಉಪಸ್ಥಿತರಿದ್ದರು.

ಕೊಳವೆ ಬಾವಿ ವ್ಯವಸ್ಥೆ: ದೇವಸ್ಥಾನದ ಬ್ರಹ್ಮಕಲಶ ಸಂದರ್ಭ ಬಹಳಷ್ಟು ಪ್ರಮಾಣದಲ್ಲಿ ನೀರಿನ ವ್ಯವಸ್ಥೆ ಅತ್ಯಂತ ಅಗತ್ಯವಾಗಿದ್ದು, ಪ್ರತ್ಯೇಕ ಕೊಳವೆ ಬಾವಿ ವ್ಯವಸ್ಥೆ ಕಲ್ಪಿಸಲು ಮನವಿಯಲ್ಲಿ ತಿಳಿಸಲಾಗಿತ್ತು. ಇಂದು ದೇವಸ್ಥಾನದ ವಠಾರದಲ್ಲಿ ಕೊಳವೆಬಾವಿಯನ್ನು ಕೊರೆಯಲಾಗಿದ್ದು, ಅಪಾರ ಪ್ರಮಾಣದಲ್ಲಿ ಶುದ್ಧ ನೀರು ಲಭ್ಯವಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಮತ್ತು ಬ್ರಹ್ಮಕಲಶ ಸಮಿತಿ ವತಿಯಿಂದ ಶಾಸಕರಿಗೆ ಧನ್ಯವಾದಗಳನ್ನು ಸಲ್ಲಿಸಿದರು.