Monday, November 25, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಮದ್ರಾಸ ಶಾಲೆಗೆ ಕಲಿಯಲು ಬರುತ್ತಿದ್ದ ಅಪ್ರಾಪ್ತ ಬಾಲಕಿಯರಿಗೆ ಉಸ್ತಾದ್‌ನಿಂದ ಲೈಂಗಿಕ ಕಿರುಕುಳ – ಕಹಳೆ ನ್ಯೂಸ್

ಪುತ್ತೂರು: ಉಸ್ತಾದ್ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿರುವ ಘಟನೆ ಪುತ್ತಿಲದ ಮದ್ರಸಾ ಶಾಲೆಯೊಂದರಲ್ಲಿ ಬೆಳಕಿಗೆ ಬಂದಿದೆ.

ಮದ್ರಾಸಕ್ಕೆ ಹೋಗುತ್ತಿದ್ದ ಬಾಲಕಿಯ ತಾಯಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಕುಂಡಡ್ಕ ಮದ್ರಾಸದ ಉಸ್ತಾದ್ ಸಿರಾಜುದ್ದೀನ್ ಮದನಿ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತಿಲ ಗ್ರಾಮದ ಕುಂಡಡ್ಕ ನಿವಾಸಿ ಮಹಿಳೆಯೊಬ್ಬರ ಇಬ್ಬರು ಹೆಣ್ಣು ಮಕ್ಕಳು ಕುಂಡಡ್ಕದ ಮದ್ರಸಾ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಜ. 28ರಂದು ರಾತ್ರಿಯ ವೇಳೆ ಶಾಲೆ ಮುಗಿಸಿ ಮಕ್ಕಳಿಬ್ಬರು ಮನೆಗೆ ಬಂದು ತಾಯಿಗೆ ಉಸ್ತಾದ್ ಮಾಡಿರುವ ನೀಚ ಕೆಲಸದ ಬಗ್ಗೆ ಹೇಳಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಣ್ಣು ಮಕ್ಕಳು ಧರಿಸಿದ್ದ ಬಟ್ಟೆ ಸರಿಸಿ ಮೈ ಮುಟ್ಟಿ ದೇಹವೆಲ್ಲ ಸವರಿದ್ದಲ್ಲದೇ ಅಪ್ಪಿ ಹಿಡಿದಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೇ ಏನಾದರೂ ಕಾರಣ ಹೇಳಿ ಉಸ್ತಾದ್‌ನ ರೂಮಿಗೆ ಕರೆಸಿಕೊಂಡು ಜನನಾಂಗವನ್ನು ಮುಟ್ಟಿಸುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಳೆದ ಒಂದು ವರ್ಷದಿಂದ ಅಸಭ್ಯವಾಗಿ ವರ್ತಿಸಿರುವುದಾಗಿ ಹೆಣ್ಣು ಮಕ್ಕಳು ಹೇಳಿದ್ದಾರೆ ಎನ್ನಲಾಗಿದ್ದು, ಸದ್ಯ ಆರೋಪಿ ಉಸ್ತಾದ್ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಫೋಕ್ಸೊ ಪ್ರಕರಣ ದಾಖಲಾಗಿದೆ.