Sunday, January 19, 2025
ಸುದ್ದಿ

ಕೇಂದ್ರ ಸರ್ಕಾರದಿಂದ ಬಂಪರ್ ಆಫರ್..! ಪೆಟ್ರೋಲ್‌, ಡಿಸೇಲ್‌ ದರ ಇಳಿಕೆ !

ನವದೆಹಲಿ: ಕೇಂದ್ರ ಸರ್ಕಾರ ವಾಹನ ಸವಾರರಿಗೆ ಬಂಪರ್ ಆಫರ್ ನೀಡಿದೆ, ಪ್ರತಿ ಲೀಟರ್‌ ಪೆಟ್ರೋಲ್‌

ಹಾಗೂ ಡಿಸೇಲ್‌ ಮೇಲಿನ ಅಬಕಾರಿ ಸುಂಕದಲ್ಲಿ 2 ರೂಪಾಯಿ ಇಳಿಸಿದೆ.
ಹೌದು, ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಜನರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದಕ್ಕೆ ಮಣಿದ ಕೇಂದ್ರ ಸರ್ಕಾರ ಪೆಟ್ರೋಲ್‌ ಹಾಗೂ ಡಿಸೇಲ್‌ ಅಬಕಾರಿ ಸುಂಕದಲ್ಲಿ 2 ರೂಪಾಯಿ ಇಳಿಸಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಹಣಕಾಸು ಸಚಿವಾಲಯ ಟ್ವೀಟ್‌ ಮಾಡಿದೆ.
ಇನ್ನು ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 70.88 ರೂ. ಮತ್ತು ಡಿಸೇಲ್‌ ಬೆಲೆ 59.14 ರೂ. ಇದ್ದು, ಪೆಟ್ರೋಲ್‌ ಸುಂಕ 21.48 ರೂ. ಮತ್ತು ಡಿಸೇಲ್‌ ಸುಂಕ 17.33 ರೂ. ಇದೆ. ಬೆಲೆ ಇಳಿಕೆಯಾಗಿದ್ದರಿಂದ ಈ ಅವಧಿಯಲ್ಲಿ ಕೇಂದ್ರ ಸರ್ಕಾರಕ್ಕೆ 13 ಸಾವಿರ ಕೋಟಿ ನಷ್ಟವಾಗಲಿದೆ ಎಂದು ಹಣಕಾಸು ಸಚಿವಾಲಯ ಟ್ವೀಟ್‌ನಲ್ಲಿ ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

Leave a Response