Monday, January 20, 2025
ಉಡುಪಿಸುದ್ದಿ

ಹಿಜಾಬ್ ವಿವಾದ: ಇಂದು ಹೈಕೋರ್ಟ್‍ನಲ್ಲಿ ಮಹತ್ವದ ತೀರ್ಪು ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು : ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶಿಸುವುದಕ್ಕೆ ನಿಬರ್ಂಧ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಪ್ರತ್ಯೇಕ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಜಾಬ್ ಕುರಿತು ಎದ್ದಿರುವ ವಿವಾದದ ಬಗ್ಗೆ ಹೈಕೋರ್ಟ್ ನಲ್ಲಿ ಇಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠವು ಇಂದು ವಿಚಾರಣೆ ನಡೆಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕುಂದಾಪುರ ತಾಲ್ಲೂಕಿನ ಭಂಡಾರ್ಕಾರ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ತೃತೀಯ ಬಿಬಿಎ ವಿದ್ಯಾರ್ಥಿ ಸುಹಾ ಮೌಲಾನಾ ಅವರು ತಮ್ಮ ತಾಯಿ ಬೀಬಿ ಸಾರಾ ಮತ್ತು ಪ್ರಥಮ ಬಿಬಿಎ ವಿದ್ಯಾರ್ಥಿನಿ ಐಶಾ ಅಲೀಫಾ ಕೌಸರ್ ಅವರು ತಮ್ಮ ತಾಯಿ ರಹಮತ್ ಅವರ ಮೂಲಕ ಕರ್ನಾಟಕ ಹೈಕೋರ್ಟ್‍ಗೆ ಮನವಿ ಸಲ್ಲಿಸಿದ್ದರು.