ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೇಮಸ್ವಾತಿಗೆ ಸನ್ಮಾನ – ಕಹಳೆ ನ್ಯೂಸ್
ಪುತ್ತೂರು: ದೆಹಲಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಗೋವಾ ಮತ್ತು ಕರ್ನಾಟಕ ಡೈರೆಕ್ಟೊರೇಟ್ ಅನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಜ್ಯೂನಿಯರ್ ಅಂಡರ್ ಆಫೀಸರ್ ಹೇಮಸ್ವಾತಿ ಅವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪ್ರಾಂಶುಪಾಲ ಮಹೇಶ ನಿಟಿಲಾಪುರ ರವರು ರವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಗೌರವವನ್ನು ಸ್ವೀಕರಿಸಿ ಬಳಿಕ ಮಾತನಾಡಿದ ಜ್ಯೂನಿಯರ್ ಅಂಡರ್ ಆಫೀಸರ್ ಹೇಮಸ್ವಾತಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಾವು ನಡೆಸಿದ ಅಭ್ಯಾಸ, ಅದರ ಅನುಭವಗಳು ಹಾಗೂ ಪೊಷಕರ, ಗುರುಗಳ ಹಾಗೂ ವಿದ್ಯಾಲಯದ ಪ್ರೋತ್ಸಾಹವನ್ನು ಮೆಲುಕು ಹಾಕಿದರು.
ಸುಳ್ಯದ ಕುರಿಯಾಜೆ ಉದಯಶಂಕರ ಕೆ ಮತ್ತು ವಸಂತಲಕ್ಷ್ಮೀ ದಂಪತಿಗಳ ಪುತ್ರಿಯಾಗಿರುವ ಹೇಮಸ್ವಾತಿ ತಮ್ಮ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2019-2021ರಲ್ಲಿ ಪಡೆದು ಪ್ರಸ್ತುತ ಪ್ರಥಮ ಪದವಿ ಶಿಕ್ಷಣವನ್ನು ವಿವೇಕಾನಂದ ಪದವಿ ಕಾಲೇಜಿನಲ್ಲಿ ಪಡೆಯುತ್ತಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ಯಕ್ಷಗಾನದಲ್ಲಿ ವಿಶೇಷ ಪ್ರಾವಿಣ್ಯತೆಯನ್ನು ಪಡೆದಿದ್ದಾರೆ.
ಉಪನ್ಯಾಸಕಿ ದಯಾಮಣಿ ಅಭಿನಂದನಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಈ ಸಂದರ್ಭ ಕಾಲೇಜಿನ ಎನ್‍ಸಿಸಿ ಅಧಿಕಾರಿ ಲೆ. ಭಾಮಿ ಅತುಲ್ ಶೆಣೈ, ಹೇಮಸ್ವಾತಿ ಹೆತ್ತವರು, ಪೊಷಕರು, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.