Saturday, November 23, 2024
ರಾಜಕೀಯರಾಷ್ಟ್ರೀಯಸುದ್ದಿ

ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್‍ಗೆ 10 ವರ್ಷ ಜೈಲು, 1 ಲಕ್ಷ ದಂಡ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ ಘೋಷಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಲೋಕ ಕಲ್ಯಾಣ ಸಂಕಲ್ಪ ಪತ್ರ-2022 ಹೆಸರಿನ ಈ ಪ್ರಣಾಳಿಕೆಯಲ್ಲಿ ಕಳೆದರ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ 212 ಸಂಕಲ್ಪಗಳಲ್ಲಿ ಶೇ.92 ರಷ್ಟು ಈಡೇರಿಸುವುದಾಗಿ ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಧಿಕಾರಕ್ಕೆ ಮರಳಿದರೆ ಮುಂದಿನ ಐದು ವರ್ಷ ರೈತರ ನೀರಾವರಿ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯತ್, 14 ದಿನದೊಳಗೆ ರೈತರಿಗೆ ಕಬ್ಬಿನ ಬಾಕಿ ಪಾವತಿಸಬೇಕು. ವಿದ್ಯಾರ್ಥಿನಿಯರಿಗೆ ಉಚಿತ ಸ್ಕೂಟರ್, 2 ಕೋಟಿ ಟ್ಯಾಬ್ಲೆಟ್ ಹಾಘೂ ಸ್ಮಾರ್ಟ್‍ಫೋನ್ ನೀಡಲಾಗುವುದು ಎಂದು ಭರವಸೆ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು