ಇಂಟರ್ನ್ಶಿಪ್ಗೆಂದು ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ; ಮಂಗಳೂರಿನ ವಕೀಲ ರಾಜೇಶ್ ಭಟ್ಗೆ ಷರತ್ತುಬದ್ಧ ಜಾಮೀನು – ಕಹಳೆ ನ್ಯೂಸ್
ಮಂಗಳೂರು: ಇಂಟರ್ನ್ಶಿಪ್ಗೆಂದು ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರ ಮೇಲೆ ತನ್ನ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿರಿಯ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಸೋಮವಾರ ಜಾಮೀನು ಮಂಜೂರಾಗಿದ್ದು, ಜಾಮೀನು ಪ್ರಕ್ರಿಯೆ ಮುಗಿಸಿ ಇನ್ನೆರಡು ದಿನದಲ್ಲಿ ರಾಜೇಶ್ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ. ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ 2021ರ ಅಕ್ಟೋಬರ್ನಲ್ಲಿ ದೂರು ದಾಖಲಿಸಿದ್ದರು. ಕಚೇರಿಯಲ್ಲಿ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡಿದ್ದರು. ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿದ ವರ್ತಿಸಿದರು ಎಂದು ಎಂದು ರಾಜೇಶ್ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದರು. ಈ ಪ್ರಕರಣ ಹೊರ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ರಾಜೇಶ್, ಡಿ.20ರಂದು ಮಂಗಳೂರು ನ್ಯಾಯಾಲಯಕ್ಕೆ ಶರಣಾಗಿದ್ದರು.
ಬಳಿಕ ಆರೋಪಿಯನ್ನ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು. ಬಳಿಕ ರಾಜೇಶ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ನಡುವೆ ಮಂಗಳೂರು ಕೋರ್ಟ್ ಹಾಗೂ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಹೈಕೋರ್ಟ್ನಲ್ಲಿ ಜಾಮೀನು ಮಂಜೂರಾಗಿದೆ.