Recent Posts

Sunday, January 19, 2025
ರಾಜಕೀಯರಾಷ್ಟ್ರೀಯಸುದ್ದಿ

ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ – ಕಹಳೆ ನ್ಯೂಸ್

ನವದೆಹಲಿ: ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ ಅಥವಾ ಹಿಜಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

 

ಕರ್ನಾಟಕದಲ್ಲಿ ಹಿಜಬ್ ಧರಿಸಿ ಕಾಲೇಜು ಕ್ಯಾಂಪಸ್ ಒಳಗೆ, ಕ್ಲಾಸ್‍ರೂಮ್‍ನೊಳಗೆ ಬರಬೇಡಿ ಎಂದು ಹೇಳಿದ್ದಕ್ಕೆ ಮುಸ್ಲಿಂ ಹುಡುಗಿಯರು ಪ್ರತಿಭಟನೆ ಶುರುವಿಟ್ಟುಕೊಂಡಿದ್ದಾರೆ. ಅದಕ್ಕೆ ಪ್ರತಿಯಾಗಿ ಹಿಂದೂ ಸಮುದಾಯದವರು ಕೇಸರಿಶಾಲು ಹಾಕಿಕೊಂಡು ಬರುತ್ತಿದ್ದಾರೆ. ಅವರು ಕ್ಲಾಸ್‍ರೂಂನಲ್ಲೂ ಧರ್ಮಾಚರಣೆ ಮಾಡುತ್ತಾರೆ ಎಂದಾದರೆ, ನಾವೂ ನಮ್ಮ ಧರ್ಮಾಚರಣೆ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಒಟ್ಟಿನಲ್ಲಿ ಇದೀಗ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹಿಜಬ್-ಕೇಸರಿಶಾಲು ವಿವಾದ ತಾರಕಕ್ಕೇರಿದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.