Friday, September 20, 2024
ಬೆಂಗಳೂರುರಾಜಕೀಯರಾಜ್ಯಸುದ್ದಿ

ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ವ್ಯವಸ್ಥಿತ ಹುನ್ನಾರ ; ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ.

ಕಾಲೇಜಿನಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿಧ್ವಜ ಹಾರಿಸಿರುವ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೇಶದ ಜನರ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಇದು ಟೂಲ್ ಕಿಟ್‍ನ ಮುಂದುವರಿದ ಭಾಗ. ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂಬ ಡಿಕೆಶಿ ಹೇಳಿಕೆ ಸತ್ಯಕ್ಕೆ ದೂರವಾದ ಮಾತು ಎಂದು ತಿರುಗೇಟು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಭಾರತದ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಕಾಂಗ್ರೆಸ್ ಟೂಲ್‍ಕಿಟ್‍ನ ಭಾಗ ಇದು. ಕೋಮು ಸೌಹಾರ್ದತೆಗೆ ಧಕ್ಕೆ ತರುವ ವ್ಯವಸ್ಥಿತ ಹುನ್ನಾರ ಇದಾಗಿದೆ. ಖಾಲಿ ಇದ್ದ ಧ್ವಜ ಸ್ತಂಭದಲ್ಲಿ ಓಂಕಾರ ಧ್ವಜ ಹಾರಿಸಲಾಗಿದೆ. ತ್ರಿವರ್ಣ ಧ್ವಜ ಇಳಿಸಿ ಓಂಕಾರ ಧ್ವಜ ಹಾರಿಸಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಕಾಂಗ್ರೆಸ್ ಆಡಳಿತ ಇದ್ದಾಗ ಹುಬ್ಬಳ್ಳಿಯ ಈದ್ಗಾ ಮೈದಾನ, ಕಾಶ್ಮೀರದ ಲಾಲ್ ಚೌಕ್ ನಲ್ಲಿ ಭಾರತದ ಧ್ವಜ ಹಾರಿಸಲು ಆಗಲಿಲ್ಲ. ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಲು ಬಲಿದಾನ ಕೊಟ್ಟ ಪಕ್ಷ ಬಿಜೆಪಿ. ಒಡೆದು ಆಳುವ ನೀತಿ, ಮತೀಯ ಭಾವನೆಗಳನ್ನು ಕೆರಳಿಸುವ ಕೆಲಸವನ್ನು ಕಾಂಗ್ರೆಸ್ ಮಾಡ್ತಿದೆ ಎಂದು ಕಿಡಿಕಾರಿದ ಅವರು, ಹಿಜಬ್ ಹಿಂದಿರುವ ಮನಸ್ಸು ಕಾಂಗ್ರೆಸ್. ಕೆಪಿಸಿಸಿ ಅಧ್ಯಕ್ಷರೇ ರಾಜ್ಯವನ್ನ ಒಡೆಯಲು ಹೊರಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.