Tuesday, January 21, 2025
ದಕ್ಷಿಣ ಕನ್ನಡಸುದ್ದಿ

ವಿಶ್ರಾಂತಿಗೆಂದು ಮಲಗಿದ್ದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು – ಕಹಳೆ ನ್ಯೂಸ್

ಮಂಗಳೂರು: ಕರ್ತವ್ಯ ನಿರತ ಅರೆ ವೈದ್ಯಕೀಯ ವಿಧ್ಯಾರ್ಥಿಯೊಬ್ಬ ಕೆಲಸ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ದೇರಳಕಟ್ಟೆಯ ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ನಡೆದಿದೆ.

ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದ್ದು, ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ ಶೀಪ್ ವಿದ್ಯಾರ್ಥಿಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಫೆ.13 ರ ರಾತ್ರಿ ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು